ಬುಧವಾರ, ಜನವರಿ 29, 2020
30 °C
ಉಪಚುನಾವಣೆ: ಧರ್ಮಸ್ಥಳದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ವೈ ಹೇಳಿಕೆ; ಮೂರುವರೆ ವರ್ಷ ರಾಜ್ಯದಲ್ಲಿ ಸ್ಥಿರ ಆಡಳಿತ

ಕಾಂಗ್ರೆಸ್, ಜೆಡಿಎಸ್‌ಗೆ ತಲಾ 1 ಸ್ಥಾನ: ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಜಿರೆ: ‘ಕಾಂಗ್ರೆಸ್‌ ಮತ್ತು ಜೆಡಿಎಸ್‌ಗಳು ತಲಾ ಒಂದೊಂದು ಕ್ಷೇತ್ರಗಳನ್ನು ಗೆಲ್ಲಬಹುದು. ನಮ್ಮ ಸರ್ಕಾರ ಮುಂದಿನ ಮೂರೂವರೆ ವರ್ಷ ಸುಭದ್ರ ಆಡಳಿತ ನೀಡುತ್ತದೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾನುವಾರ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ದೇಗುಲಕ್ಕೆ ಭೇಟಿ ನೀಡಿ, ಶತ ರುದ್ರಾಭಿಷೇಕ ಸೇವೆ ಅರ್ಪಿಸಿ
ದರು. ಬಳಿಕ ಸಂಕಲ್ಪ ಮಾಡಿ ಪ್ರಸಾದ ಸ್ವೀಕರಿಸಿದ ಬಳಿಕ ಅವರು, ‘ಸುಸ್ಥಿರ ಸರ್ಕಾರದ ಮೂಲಕ ರಾಜ್ಯಕ್ಕೆ ಕಲ್ಯಾಣವಾಗಲಿ’ ಎಂದು ಪ್ರಾರ್ಥನೆ ಮಾಡಿರುವುದಾಗಿ ತಿಳಿಸಿದರು.

‘ಉಳಿದಿರುವ ಅವಧಿಯಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಅಭಿವೃದ್ಧಿ ಕಾರ್ಯಗಳಿಗೆ ವಿರೋಧ ಪಕ್ಷಗಳು ಸಹಕಾರ ನೀಡುತ್ತವೆ ಎಂದು ಭಾವಿಸಿದ್ದೇನೆ’ ಎಂದರು.

ರಾಜ್ಯದಲ್ಲಿ ಮೂರೂವರೆ ವರ್ಷ ಅಧಿಕಾರದ ಅವಧಿ ಪೂರ್ಣಗೊಳಿಸಿದ ಬಳಿಕ ಮತ್ತೊಮ್ಮೆ ರಾಜ್ಯದ ಜನತೆ ಬಿಜೆಪಿ ಕೈ ಹಿಡಿಯಲಿದ್ದಾರೆ. ಆಗ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವುದಾಗಿ ಅವರು ಹೇಳಿದರು.

‘ಡಿ.9 ರ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಆಗುತ್ತದೆ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿರುವುದನ್ನು ಪ್ರಸ್ತಾಪಿಸಿದ ಅವರು, ಯಾವುದೇ ಬದಲಾವಣೆಗಳು ಆಗುವುದಿಲ್ಲ. ಕಾಂಗ್ರೆಸ್‌ ವಿರೋಧಪಕ್ಷದಲ್ಲಿ ಮುಂದುವರಿಯುವುದು ನಿಶ್ಚಿತ. ಅದಕ್ಕಿಂತ ಹೆಚ್ಚಿನ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ’ ಎಂದು ಯಡಿಯೂರಪ್ಪ ಹೇಳಿದರು. 

‘ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಅಸ್ಥಿರತೆ ಕೊನೆಯಾಗಲಿದೆ’ ಎಂದು ಭರವಸೆ ವ್ಯಕ್ತಪಡಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು