ಭಾನುವಾರ, ಆಗಸ್ಟ್ 1, 2021
28 °C

ರಾಜ್ಯಸಭೆ ಚುನಾವಣಾ ಕಣಕ್ಕೆ ಮಾಜಿ ಪ್ರಧಾನಿ ದೇವೇಗೌಡ: ಎಚ್‌.ಕೆ.ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಂಗ್ರೆಸ್‌ ನೆರವು ಪಡೆದು ಎಚ್‌.ಡಿ.ದೇವೇಗೌಡರನ್ನು ರಾಜ್ಯಸಭೆ ಚುನಾವಣೆ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ ತಿಳಿಸಿದರು.

ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಇಂದಿನ ಸಂಕಷ್ಟದ ಸ್ಥಿತಿಯಲ್ಲಿ ದೇಶಕ್ಕೆ ದೇವೇಗೌಡ ಅವರಂತಹ ಅವಶ್ಯಕತೆ ಇದೆ. ನಾಲ್ಕನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಕಾಂಗ್ರೆಸ್‌ ಪಕ್ಷ ನಮ್ಮ ಜತೆ ಚರ್ಚೆ ನಡೆಸಿಲ್ಲ. ದೇವೇಗೌಡರಿಗೆ ಎಲ್ಲ ಪಕ್ಷಗಳೂ ಬೆಂಬಲಿಸುತ್ತವೆ' ಎಂಬುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಕರ್ನಾಟಕದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಖರ್ಗೆ ಆಯ್ಕೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು