ಭಾನುವಾರ, ಮಾರ್ಚ್ 7, 2021
27 °C

ಕಾಂಗ್ರೆಸ್, ಜೆಡಿಎಸ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ವಾಪಸ್ ಪಡೆಯುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕಚೇರಿ ಮುಂದೆ ಸೇರಿದ ಕಾರ್ಯಕರ್ತರು, ‘ಶಾಸಕರು ತಮ್ಮ ಸ್ವಾರ್ಥಕ್ಕಾಗಿ ರಾಜೀನಾಮೆ ನೀಡಿದ್ದಾರೆ. ಯಾವುದೇ ಕಾರಣ ನೀಡದೆ ತಕ್ಷಣ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.

‘ಪಕ್ಷ ನಿಮ್ಮೊಂದಿಗೆ ಇದೆ, ನಿಮ್ಮ ಹಿಂದೆ ನಾವಿದ್ದೇವೆ. ಪಕ್ಷದ ಶಿಸ್ತಿನ ಸಿಪಾಯಿಗಳು, ಪಕ್ಷ ತೊರೆಯಬೇಡಿ’ ಎಂದು ಒತ್ತಾಯಿಸಿದರು.

ಜೆಡಿಎಸ್ ಪ್ರತಿಭಟನೆ: ಭಾನುವಾರ ರಾತ್ರಿ ಜೆಡಿಎಸ್ ಕಚೇರಿ ಜೆ.ಪಿ ಭವನದ ಎದುರು ಪಕ್ಷದ ಕಾರ್ಯಕರ್ತರು ಧರಣಿ ನಡೆಸಿ, ಶಾಸಕರ ರಾಜೀನಾಮೆ ವಾಪಸ್‌ಗೆ ಒತ್ತಾಯಿಸಿದರು.

ರಾಜೀನಾಮೆ ನೀಡಿದ ಶಾಸಕರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕು. ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅಂತಹವರಿಗೆ ವೋಟು ಹಾಕಬಾರದು ಎಂದು ಮನವಿ ಮಾಡಿದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು