ಸೋಮವಾರ, ಏಪ್ರಿಲ್ 6, 2020
19 °C

ಕನಕಪುರಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕು: ಸಿಎಂಗೆ ಡಿಕೆಶಿ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದು ಮಾಡಿರುವುದು ಸರಿಯಲ್ಲ. ಈ ಕೂಡಲೇ ರದ್ದತಿ ಹಿಂಪಡೆದು ವೈದ್ಯಕೀಯ ಕಾಲೇಜಿಗೆ ಭೂಮಿ ಪೂಜೆ ಮಾಡಬೇಕು ಎಂದು ಮಾಜಿ ಸಚಿವ, ಕಾಂಗ್ರೆಸ್‌ ನಾಯಕ ಡಿ.ಕೆ ಶಿವಕುಮಾರ್‌ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ. 

ಈ ಕುರಿತು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಡಿಕೆಶಿ, ‘ ಚಿಕ್ಕಬಳ್ಳಾಪುರಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿರುವ ವಿಚಾರದಲ್ಲಿ ನನಗೆ ಯಾವುದೇ ತಕರಾರುಗಳಿಲ್ಲ. ಆದರೆ, ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದು ಮಾಡಿರುವುದು ಸರಿಯಲ್ಲ,’ ಎಂದು ಅವರು ಹೇಳಿದ್ದಾರೆ. 

‘ಕನಕಪುರಕ್ಕೆ ಸಿಕ್ಕಿದ್ದ ವೈದ್ಯಕೀಯ ಕಾಲೇಜನ್ನು ರದ್ದು ಮಾಡಿದ ಆದೇಶ ಹಿಂದೆ ಪಡೆದು ಕೂಡಲೇ ಮಂಜೂರಾತಿ ಆದೇಶ ಹೊರಡಿಸಬೇಕು. ಅಲ್ಲದೆ, ವೈದ್ಯಕೀಯ ಕಾಲೇಜಿನ ಭೂಮಿ ಪೂಜೆಗೆ ದಿನಾಂಕ ನಿಗದಿ ಮಾಡಬೇಕು,’  ಎಂದು ಅವರು ಮನವಿ ಮಾಡಿದ್ದಾರೆ. 

ಇದೇ ವಿಚಾರವಾಗಿ ಡಿಕೆ ಶಿವಕುಮಾರ್‌ ಅವರು ಮಂಗಳವಾರ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರನ್ನು ಸ್ವತಃ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 

ಕನಕಪುರದ ವೈದ್ಯಕೀಯ ಕಾಲೇಜು ರದ್ದತಿ ವಿರುದ್ಧ ಈ ಹಿಂದೆಯೂ ಸರ್ಕಾರಕ್ಕೆ ಪತ್ರ ಬರೆದಿದ್ದ ಡಿ.ಕೆ ಶಿವಕುಮಾರ್‌ ‘ಕನಕಪುರಕ್ಕೆ ಮೆಡಿಕಲ್‌ ಕಾಲೇಜು ಮಂಜೂರು ಮಾಡಬೇಕು. ಇಲ್ಲವಾದಲ್ಲಿ ನನ್ನದೇ ರೀತಿಯಲ್ಲಿ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು