ಎಸ್‌. ಎಂ. ಕೃಷ್ಣ ನಿವಾಸದಲ್ಲಿ ಅಶೋಕ್‌, ಜಾರಕಿಹೊಳಿ, ಸುಧಾಕರ್‌ ಭೇಟಿ: ಸಮಾಲೋಚನೆ

ಭಾನುವಾರ, ಜೂನ್ 16, 2019
28 °C

ಎಸ್‌. ಎಂ. ಕೃಷ್ಣ ನಿವಾಸದಲ್ಲಿ ಅಶೋಕ್‌, ಜಾರಕಿಹೊಳಿ, ಸುಧಾಕರ್‌ ಭೇಟಿ: ಸಮಾಲೋಚನೆ

Published:
Updated:

ಬೆಂಗಳೂರು: ರಾಜ್ಯ ಕಾಂಗ್ರೆಸ್‌–ಜೆಡಿಎಸ್‌ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿರುವ ಶಾಸಕ ರಮೇಶ್‌ ಜಾರಕಿಹೊಳಿ ಮತ್ತು ಸುಧಾಕರ್‌ ಅವರು ಭಾನುವಾರ ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ನಿವಾಸದಲ್ಲಿ ಮಾಜಿ ಡಿಸಿಎಂ ಅಶೋಕ್‌ ಅವನ್ನು ಭೇಟಿಯಾಗಿ  ಸಮಾಲೋಚನೆ ನಡೆಸಿದರು.  

ರಾಜ್ಯದಲ್ಲಿ ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿಕೂಟ ಸೋಲು ಅನುಭವಿಸಿರುವ ಹೊತ್ತಿನಲ್ಲಿ, ಸರ್ಕಾರ ಅಸ್ಥಿರದ ಮಾತುಗಳು ಕೇಳಿ ಬರುತ್ತಿರುವ ಸಂದರ್ಭದಲ್ಲೇ ಈ ಇಬ್ಬರೂ ಶಾಸಕರು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿಯಾಗಿರುವುದರ ಹಿಂದೆ ರಾಜಕೀಯ ಕಾರಣಗಳಿವೆ ಎಂದು ಹೇಳಲಾಗುತ್ತಿದೆ. ಆದರೆ, ಈ ವಾದವನ್ನು ರಮೇಶ್‌ ಮತ್ತು ಸುಧಾಕರ್‌ ನಿರಾಕರಿಸಿದ್ದಾರೆ. 

ಈ ಕುರಿತು ಮಾತನಾಡಿರುವ ರಮೇಶ್‌ ಜಾರಕಿಹೊಳಿ, ‘ಇದು ರಾಜಕೀಯ ಭೇಟಿಯಲ್ಲ. ಬಿಜೆಪಿ ಕರ್ನಾಟಕದಲ್ಲಿ 25 ಸ್ಥಾನಗಳನ್ನು ಗೆದ್ದಿರುವ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಲು ನಾನು ಬಂದಿದ್ದೆ. ಇದೊಂದು ಸೌಹಾರ್ದಯುತ ಭೇಟಿ,’ ಎಂದಷ್ಟೇ ಹೇಳಿದರು.

ನಂತರ ಮಾತನಾಡಿದ ಮಾಜಿ ಡಿಸಿಎಂ ಆರ್‌.ಅಶೋಕ್‌, ‘ಪಕ್ಷದ ವಿಚಾರವಾಗಿ ಚರ್ಚೆ ನಡೆಸಲು ಕೃಷ್ಣ ಅವರನ್ನು ಭೇಟಿಯಾದೆ. ಕಾಂಗ್ರೆಸ್‌ ಶಾಸಕರಾದ ರಮೇಶ್‌ ಜಾರಕಿಹೊಳಿ ಮತ್ತು ಸುಧಾಕರ್‌ ನಡುವೆ ನನಗೆ ಯಾವುದೇ ರೀತಿಯ ಸಂಪರ್ಕವಿಲ್ಲ,’ ಎಂದು ಹೇಳಿದರು. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 3

    Happy
  • 1

    Amused
  • 1

    Sad
  • 0

    Frustrated
  • 8

    Angry

Comments:

0 comments

Write the first review for this !