ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ.ಪರಮೇಶ್ವರ ಮನವೊಲಿಕೆಗೆ ಮುಂದಾದ ಕಾಂಗ್ರೆಸ್ ನಾಯಕರು

Last Updated 17 ಮಾರ್ಚ್ 2019, 9:00 IST
ಅಕ್ಷರ ಗಾತ್ರ

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಮುನಿಸಿಕೊಂಡಿರುವ ಉಪ‌ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ಮನವೊಲಿಕೆಗೆ ಮುಖಂಡರು ಭಾನುವಾರ ಯತ್ನಿಸಿದರು.

ಸದಾಶಿವನಗರದಲ್ಲಿರುವ ಪರಮೇಶ್ವರ ನಿವಾಸಕ್ಕೆ ತೆರಳಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಂಸದ ಮುದ್ದಹನುಮೇಗೌಡರಿಗೆ ಸೂಕ್ತ ಸ್ಥಾನಮಾನ ಕೊಡುವುದಾಗಿ ಭರವಸೆ ನೀಡಿದರು.

ರಾಜ್ಯ ಮಟ್ಟದ ಪ್ರಯತ್ನದಿಂದ ತುಮಕೂರಿನಲ್ಲಿ ಕಾಂಗ್ರೆಸ್‌ಗೆ ಅವಕಾಶ ಸಿಗುವುದು ಕಷ್ಟ ಎಂದು ಮನವರಿಕೆಯಾದ ಹಿನ್ನೆಲೆಯಲ್ಲಿ ಪರಮೇಶ್ವರ ಅವರು ಮುದ್ದಹನುಮೇಗೌಡರನ್ನು ದೆಹಲಿಗೆ ಕಳಿಸಿ,ಹೈಕಮಾಂಡ್ ನಾಯಕರನ್ನುಭೇಟಿಯಾಗಲು ಸೂಚಿಸಿದ್ದಾರೆ. ಜೆಡಿಎಸ್ ನಾಯಕ ಎಚ್‌.ಡಿ.ದೇವೇಗೌಡ ಅವರನ್ನು ಶನಿವಾರ ದೆಹಲಿಯಲ್ಲಿ ಮುದ್ದಹನುಮೇಗೌಡ ಭೇಟಿಯಾಗಿದ್ದರು.

ವಿಶೇಷ ಅರ್ಥ ಬೇಡ

ಪರಮೇಶ್ವರ್ ಭೇಟಿಗೆ ಮುನ್ನಮಾಧ್ಯಮ ಪ್ರತಿನಿಧಿಗಳೊಡನೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ‘ನಮ್ಮಿಬ್ಬರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಪರಮೇಶ್ವರ ನಮ್ಮ ನಾಯಕರು. ಚುನಾವಣಾ ಸಿದ್ಧತೆ ಸಂಬಂಧ ಚರ್ಚಿಸುತ್ತೇವೆ. ಅವರುಇಡೀ ರಾಜ್ಯದ ನಾಯಕರು. ತುಮಕೂರಿಗೆ ಮಾತ್ರ ನಾಯಕರಲ್ಲ. ತುಮಕೂರು ಕುರಿತು ಎರಡೂ ಪಕ್ಷದ ನಾಯಕರು ಕೂತು ಚರ್ಚೆ ಮಾಡುತ್ತೇವೆ.ಕೊನೆಯ ಘಳಿಗೆಯಲ್ಲಿ ಏನಾದರೂ ಆಗಬಹುದು’ ಎಂದು ಹೇಳಿದರು.

‘ನಾವೆಲ್ಲರೂ ತುಮಕೂರು ಸಂಸದಮುದ್ದಹನುಮೇಗೌಡರ ಪರ ಇದ್ದೇವೆ.‌ ಅವರಿಗೆ ಆಗಿರುವ ಅನ್ಯಾಯ ಸರಿಪಡಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದೇವೆ. ನಾನೂ ಕೂಡ ದೇವೇಗೌಡರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ. ಪರಮೇಶ್ವರ್ ಒಬ್ಬರೇ ತುಮಕೂರು ಮರಳಿ ಪಡೆಯಲು ಪ್ರಯತ್ನ ಪಡ್ತಿಲ್ಲ. ನಾವೆಲ್ಲರೂ ಸೇರಿ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ ಮೈಸೂರಿಗೆ ಸೀಮಿತರಲ್ಲ

ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯ ಮೈಸೂರು ಕ್ಷೇತ್ರಕ್ಕೆ ಮಾತ್ರಸೀಮಿತರಾಗಿದ್ದಾರೆ ಎನ್ನುವುದು ಆಧಾರ ರಹಿತ ಆರೋಪ. ಪಕ್ಷದಲ್ಲಿರುವ ಎಲ್ಲ ನಾಯಕರೂ ತಮ್ಮ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ನಮ್ಮ ವೈಯಕ್ತಿಕ ಅಭಿಪ್ರಾಯ ಮತ್ತು ತೀರ್ಮಾನಗಳು ಏನೇ ಇದ್ದರೂ ನಾವೆಲ್ಲರೂ ಸಂಘಟಿತರಾಗಿ ಹೈಕಮಾಂಡ್ ತೀರ್ಮಾನವನ್ನು ಅನುಷ್ಠಾನಕ್ಕೆ ತರುತ್ತೇವೆ. ಮೈತ್ರಿ ಧರ್ಮದಂತೆ ಕಾಂಗ್ರೆಸ್–ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಎಲ್ಲರೂ ಶ್ರಮಿಸುತ್ತೇವೆ ಎಂದರು.

ರಾಜ್ಯದಿಂದ ರಾಹುಲ್

ರಾಹುಲ್ ಗಾಂಧಿ ಅವರಿಗೆ ಈ ಬಾರಿ ರಾಜ್ಯದಿಂದ ಸ್ಪರ್ಧಿಸುವಂತೆ ವಿನಂತಿಸಿದ್ದೇವೆ.ರಾಹುಲ್ ಗಾಂಧಿ ಸೋಮವಾರ ರಾಜ್ಯಕ್ಕೆ ಬರ್ತಿದ್ದಾರೆ. ಅವರು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದರೂ ನಾವೆಲ್ಲರೂ ಒಗ್ಗೂಡಿ ಶ್ರಮಿಸಿ ಗೆಲ್ಲಿಸುತ್ತೇವೆ ಎಂದರು. ರಾಜ್ಯದಲ್ಲಿ ರಾಹುಲ್ ಸ್ಪರ್ಧಿಸಲು ಸಾಧ್ಯವಿರುವ ಮೂರ್ನಾಲ್ಕು ಕ್ಷೇತ್ರಗಳಿವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT