ಗುರುವಾರ , ಮಾರ್ಚ್ 4, 2021
18 °C

ಜುಲೈ 9ಕ್ಕೆ ಶಾಸಕಾಂಗ ಸಭೆ ಕರೆದ ಕಾಂಗ್ರೆಸ್‌ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ತೊಲೆದೋರಿರುವ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷವು ಮಂಗಳವಾರ ಶಾಸಕಾಂಗ ಪಕ್ಷದ ಸಭೆ ಕರೆದಿದೆ.

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಂಗಳವಾರ ವಿಧಾನಸೌಧದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.  ಕೆಸಿ ವೇಣುಗೋಪಾಲ್‌ ಮತ್ತು ಕಾಂಗ್ರೆಸ್ ಅಧ್ಯಕ್ಷ  ದಿನೇಶ್‌ ಗುಂಡೂರಾವ್ ಅವರೂ ಸಭೆಯಲ್ಲಿ ಹಾಜರಿರಲಿದ್ದಾರೆ. ಸಭೆಗೆ ಎಲ್ಲ ಶಾಸಕರೂ ಕಡ್ಡಾಯವಾಗಿ ಹಾಜರಾಗಬೇಕು ಎಂದು ತಿಳಿಸಲಾಗಿದೆ. ಒಂದು ವೇಳೆ ಸಭೆಗೆ ಗೈರಾದರೆ, ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಶಾಸಕರಿಗೆ ಸೂಚಿಸಲಾಗಿದೆ. 

ಅದೇ ದಿನ ಶಾಸಕರ ರಾಜೀನಾಮೆ ಪತ್ರದ ಪರಿಶೀಲನೆಯೂ ನಡೆಯಲಿದೆ. ಶಾಸಕರು ಸಲ್ಲಿಸಿರುವ ರಾಜೀನಾಮೆಯನ್ನು ಮಂಗಳವಾರ ಪರಿಶೀಲನೆ ನಡೆಸುವುದಾಗಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಶನಿವಾರ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದರು. 

ಇತ್ತ ಜೆಡಿಎಸ್‌ ಕೂಡ ಭಾನುವಾರ ರಾತ್ರಿ ಮಹತ್ವದ ಸಭೆ ನಡೆಸುತ್ತಿದೆ ಎಂದು ಹೇಳಲಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಪ್ರಮುಖರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು