ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ: ಇಂದು ಸಭೆ

7

ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ: ಇಂದು ಸಭೆ

Published:
Updated:

ಬೆಂಗಳೂರು: ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ನೇತೃತ್ವದಲ್ಲಿ ಮಂಗಳವಾರ ಕಾಂಗ್ರೆಸ್‌ ನಾಯಕರ ಸಭೆ ನಡೆಯಲಿದೆ.

ಜೆಡಿಎಸ್‌ ಜೊತೆ ಮೈತ್ರಿ ಪರಿಣಾಮ, ಶಿವಮೊಗ್ಗ ಮತ್ತು ಬಳ್ಳಾರಿ ಲೋಕಸಭೆ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಬಹುತೇಕ ಖಚಿತವಾಗಿದೆ.

ಈ ಕ್ಷೇತ್ರಗಳ ವ್ಯಾಪ್ತಿಯ ಜಿಲ್ಲಾ ಘಟಕಗಳ ಪ್ರಮುಖರ ಜೊತೆ ಸಭೆ ನಡೆಯಲಿದೆ. ಸಭೆಯಲ್ಲಿ ಅಭ್ಯರ್ಥಿ ಹೆಸರು ಅಂತಿಮಗೊಳಿಸಿ ಅನುಮೋದನೆಗೆ ಹೈಕಮಾಂಡ್‌ಗೆ ಕಳುಹಿಸುವ ಬಗ್ಗೆ ತೀರ್ಮಾನ ಆಗಲಿದೆ. ಅಲ್ಲದೆ, ಇದೇ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ರಾಜ್ಯ ನಾಯಕರ ಜೊತೆ ವೇಣುಗೋಪಾಲ್‌ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Tags: 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !