ಬೆಂಗಳೂರು: ವಿಧಾನಸಭಾ ಅಧಿವೇಶನಕ್ಕೆ ಹಾಜರಾಗದಿರುವ ಬಗ್ಗೆ ಕಾಗವಾಡದ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ ಅವರು ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅವರಿಗೆ ಶುಕ್ರವಾರ ಇ–ಮೇಲ್ ಕಳುಹಿಸಿದ್ದು, ಈ ಅಧಿವೇಶನಕ್ಕೆ ಬರಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

‘ನಗರದ ಹೋಟೆಲ್ನಲ್ಲಿ ಕಾಂಗ್ರೆಸ್ ಪಕ್ಷದ ಸಭೆ ಮುಗಿದ ಬಳಿಕ ಗೋವಾಕ್ಕೆ ತೆರಳಿದ್ದೆ. ಆಗ ಎದೆಯಲ್ಲಿ ನೋವು ಕಾಣಿಸಿಕೊಂಡಿತ್ತು. ಮುಂಬೈಯ ವೈದ್ಯರಿಗೆ ಕರೆ ಮಾಡಿದ್ದೆ. ಆಸ್ಪತ್ರೆಗೆ ಬರುವಂತೆ ತಿಳಿಸಿದ್ದರು. ಹಾಗಾಗಿ, ಅಲ್ಲಿಗೆ ಹೋಗಿದ್ದೇನೆ ಹೊರತು ಯಾರೂ ಅಪಹರಣ ಮಾಡಿಲ್ಲ’ ಎಂದು ಶ್ರೀಮಂತ ಪಾಟೀಲ ತಿಳಿಸಿದ್ದಾಗಿ ಸಭಾಧ್ಯಕ್ಷರು ವಿಧಾನಸಭೆಗೆ ತಿಳಿಸಿದರು.

ಶ್ರೀಮಂತ ಪಾಟೀಲ ಅವರನ್ನು ಬಿಜೆಪಿಯವರು ಅಪಹರಿಸಿದ್ದಾರೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಸದನದಲ್ಲೇ ಆಪಾದಿಸಿದ್ದರು. ಅವರನ್ನು ಪತ್ತೆ ಹಚ್ಚಿ ವಿವರ ಕೊಡಿ ಎಂದು ಗೃಹ ಸಚಿವ ಎಂ.ಬಿ. ಪಾಟೀಲರಿಗೆ ಸೂಚಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.