ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಸ್ಥಾನಕ್ಕೆ ಜಾಧವ ರಾಜೀನಾಮೆ ನಾಳೆ?

Last Updated 3 ಮಾರ್ಚ್ 2019, 20:21 IST
ಅಕ್ಷರ ಗಾತ್ರ

ಕಲಬುರ್ಗಿ: ಚಿಂಚೋಳಿ ಕಾಂಗ್ರೆಸ್ ಶಾಸಕ ಡಾ.ಉಮೇಶ ಜಾಧವ ಅವರು ಮಾ.5ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಮಾ.6ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರ್ಗಿಯಲ್ಲಿ ನಡೆಸಲಿರುವ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಜಾಧವ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಅವರನ್ನು ಬಿಜೆಪಿಯಿಂದ ಕಲಬುರ್ಗಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗುತ್ತಿದೆ’ ಎಂದು ಮೂಲಗಳು ಖಚಿತ ಪಡಿಸಿವೆ.

‘ಜಾಧವ ಅವರು ಮೋದಿ ಸಮ್ಮುಖದಲ್ಲಿ ಬಿಜೆಪಿ ಸೇರುವುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆ ಬಗ್ಗೆ ಖಚಿತವಾಗಿಹೇಳಲು ಸಾಧ್ಯವಿಲ್ಲ. ಅದನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ನೋಡಿಕೊಳ್ಳುತ್ತಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್‌ ಕಲಬುರ್ಗಿಯಲ್ಲಿ ಪ್ರತಿಕ್ರಿಯಿಸಿದರು.

ಉಮೇಶ ಜಾಧವ ಸಂಪರ್ಕಕ್ಕೆ ಸಿಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT