ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಕೈ ಶಾಸಕರು

ಬುಧವಾರ, ಜೂಲೈ 17, 2019
24 °C

ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಕೈ ಶಾಸಕರು

Published:
Updated:

ಬೆಂಗಳೂರು:  ರಾಜೀನಾಮೆ ಬೃಹನ್ನಾಟಕದ ನಂತರ ಕಾಂಗ್ರೆಸ್‌ನ ಕೆಲವು ಶಾಸಕರು ಕಾಂಗ್ರೆಸ್‌ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಮನೆಗೆ ತೆರಳಿ ಮಾತುಕತೆ ನಡೆಸಿದ್ದಾರೆ.

ಶಹಾಪುರ ಶಾಸಕ ಶರಣಬಸಪ್ಪ ಗೌಡ ಹಾಗೂ ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಅವರು ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಖರ್ಗೆ ಅವರು ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಮಾತುಗಳಿಗೆ ಈ ಭೇಟಿ ಇಂಬು ನೀಡುತ್ತಿದೆ.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ‘ನಾನು ಈಗ ಸಿಎಂ ಆಗುತ್ತೇನೆ ಎಂಬುದು ಸುಳ್ಳು. ಶಾಸಕರು ತಮ್ಮ ರಾಜೀನಾಮೆಗೆ ಹಲವು ಕಾರಣಗಳನ್ನು ಕೊಟ್ಟಿದ್ದಾರೆ. ರಾಜೀನಾಮೆ ಕೊಟ್ಟ ಶಾಸಕರ ಮನವೊಲಿಸುವ ಪ್ರಯತ್ನ ನಡೆಸುತ್ತೇವೆ, ನೋಡೋಣ’ ಎಂದು ಹೇಳಿದರು.

’ಹಲವರು ವರ್ಷಗಳಿಂದ ಕಾಂಗ್ರೆಸ್‌ನಲ್ಲಿದ್ದವರು. ಈಗ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ‌ ಎಷ್ಟರ ಮಟ್ಟಿಗೆ ಅವರ ಮನವೊಲಿಸಲು ಯಶಸ್ವಿಯಾಗುತ್ತೀವೋ ನೋಡಬೇಕು. ಬಿಜೆಪಿ ಹದಿನಾಲ್ಕು ರಾಜ್ಯಗಳಲ್ಲಿ ಆಪರೇಷನ್ ಕಮಲ ಮಾಡಿದ್ದಾರೆ. ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡ ಇದೆ. ಚುನಾಯಿತ ಸರ್ಕಾರವನ್ನು ಕುಸಿಯುವವಂತೆ ಮಾಡುವುದಕ್ಕೆ ಬಿಜೆಪಿ ಸದಾ ಪ್ರಯತ್ನ ಮಾಡುತ್ತಿದೆ’ ಎಂದರು.

’ಶಾಸಕರನ್ನು ಹೆದರಿಸಿ, ಬೆದರಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಸರ್ಕಾರ ರಚನೆಯಾಗಿ ಆರು ತಿಂಗಳೂ ಆಗಿಲ್ಲ. ಆಗಲೇ ಪ್ರಧಾನಿ ಮೋದಿ, ಅಮಿತ್ ಶಾ ಸರ್ಕಾರ ಬೀಳಿಸಲು ಹೊರಟಿದ್ದಾರೆ. ಅತೃಪ್ತ ಶಾಸಕರು ಮುಂಬೈಗೆ ತೆರಳಲು ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ. ಇದನ್ನು ಮಾಡಿರೋದು ಯಾರು? ಏನು ರಾಜೀನಾಮೆ ನೀಡಿರುವ ಶಾಸಕರು ವಿಮಾನ ಮಾಡಿಕೊಂಡು ಹೋಗ್ತಾರಾ’ ಎಂದು ಪ್ರಶ್ನಿಸಿದರು.

ಬರಹ ಇಷ್ಟವಾಯಿತೆ?

 • 13

  Happy
 • 2

  Amused
 • 1

  Sad
 • 0

  Frustrated
 • 5

  Angry

Comments:

0 comments

Write the first review for this !