ಸೋಮವಾರ, ಏಪ್ರಿಲ್ 6, 2020
19 °C

ಖರ್ಗೆ ಸಿಎಂ ಆಗಲು ಒಪ್ಪದ ಕಾಂಗ್ರೆಸ್‌: ಎಚ್‌ಡಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ‘ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಮಾಡುವಂತೆ ನಾನು ಮೈತ್ರಿ ಸರ್ಕಾರ ರಚನೆ ವೇಳೆ ಹೇಳಿದ್ದೆ. ಆದರೆ, ಕೇಂದ್ರ ಕಾಂಗ್ರೆಸ್ ನಾಯಕರು ಖರ್ಗೆ ಸಿಎಂ ಆಗಲು ಒಪ್ಪಲಿಲ್ಲ’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು.

ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ‘ಕೇಂದ್ರದ ಕಾಂಗ್ರೆಸ್‌ ನಾಯಕರ ಒತ್ತಾಸೆಯಂತೆ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆದರು. ನಾವು ಯಾವತ್ತೂ ಅಧಿಕಾರವನ್ನು ಕೇಳಿಲ್ಲ. ರಾಜಕೀಯ ಏಳುಬೀಳುಗಳ ಮಧ್ಯೆ ಮೈತ್ರಿ ಸರ್ಕಾರ ಬಿದ್ದು ಹೋಯಿತು’ ಎಂದು ಅವರು ಹೇಳಿದರು.

‘ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಉಳಿಸುವ ಛಲ, ಹಟವಿದೆ. ಸಾಯುವವರೆಗೂ ಕೂಡಾ ಪಕ್ಷ ಸಂಘಟನೆ ಮಾಡುತ್ತೇನೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು