ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ಶಾಲೆ ದಾಖಲಾತಿಗೆ ಇಂದು ಕೊನೆ

ಜಿಲ್ಲೆಯ 21 ವಸತಿ ಶಾಲೆಗಳಿಗೆ ನಗರದ ಅಂಬೇಡ್ಕರ್ ಭವನದಲ್ಲಿ ಇತ್ತೀಚೆಗೆ ಆರಂಭಗೊಂಡ ಪ್ರವೇಶಾತಿ ಪ್ರಕ್ರಿಯೆ
Last Updated 19 ಮೇ 2018, 10:18 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಬಿ.ಆರ್.ಅಂಬೇಡ್ಕರ್ ಹಾಗೂ ಇಂದಿರಾ ಗಾಂಧಿ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗೆ ನಗರದ ಅಂಬೇಡ್ಕರ್ ಭವನದಲ್ಲಿ ಇತ್ತೀಚೆಗೆ ಆರಂಭಗೊಂಡ ಪ್ರವೇಶಾತಿ ಪ್ರಕ್ರಿಯೆ ಶನಿವಾರ ಕೊನೆಗೊಳ್ಳಲಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಈ ಪ್ರವೇಶಾತಿ ಪ್ರಕ್ರಿಯೆ ನಡೆದಿದೆ.

ಚಿಂತಾಮಣಿ ತಾಲ್ಲೂಕು ಕೆ.ರಾಗುಟ್ಟಹಳ್ಳಿ, ಮುಂಗಾನಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ನಿಲಯ, ಗಡಿವಾರಪಲ್ಲಿ, ಮುರುಗಮಲ್ಲ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಗೌರಿಬಿದನೂರು ತಾಲ್ಲೂಕು ಕರೇಕಲ್ಲಲಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ನಗರಗೆರೆ ಹಾಗೂ ಮಣಿವಾಲ ಕಿತ್ತೂರು ರಾಣಿ ಚನ್ನಮ್ಮ ವಸತಿ ನಿಲಯ, ಮಂಚೇನಹಳ್ಳಿ ಅಂಬೇಡ್ಕರ್‌ ವಸತಿ ನಿಲಯ.

ಬಾಗೇಪಲ್ಲಿ ತಾಲ್ಲೂಕು ಚೇಳೂರು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಮಿಟ್ಟೇಮರಿ ಕಿತ್ತೂರು ರಾಣಿ ಚೆನ್ನಮ್ಮ, ಪೂಲವಾರಪಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಶಿಡ್ಲಘಟ್ಟ ತಾಲ್ಲೂಕು ಪಿಂಡಿಪಾಪನಹಳ್ಳಿ ಇಂದಿರಾ ಗಾಂಧಿ ವಸತಿ ಶಾಲೆ, 11ನೇ ಮೈಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ. ಗುಡಿಬಂಡೆ ತಾಲ್ಲೂಕು ಕುಪ್ಪಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಪ್ರವೇಶಾತಿ ಪ್ರಕ್ರಿಯೆ ನಡೆಯಿತು.

ಸುಮಾರು 2,900 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದರು. ಆ ಪೈಕಿ ಒಟ್ಟು 21 ಶಾಲೆಗಳಿಗೆ ಫಲಿತಾಂಶದ ಆಧಾರದಲ್ಲಿ ತಲಾ 50ರಂತೆ 1,050 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ.

ಚಿಕ್ಕಬಳ್ಳಾಪುರ 43, ಚಿಂತಾಮಣಿ 235, ಬಾಗೇಪಲ್ಲಿ 283, ಗೌರಿಬಿದನೂರು 187, ಶಿಡ್ಲಘಟ್ಟ 190, ಗುಡಿಬಂಡೆ 105 ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಪ್ರವೇಶ ಪತ್ರ ವಿತರಿಸಲಾಗಿತ್ತು. ಮೊದಲ ದಿನದಂದು 74 ಅಂಗವಿಕಲರು, 351 ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಕೌನ್ಸಲಿಂಗ್‌ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಹನುಮಂತರಾಯಪ್ಪ, ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಧೀಕ್ಷಕ ರಾಜಣ್ಣ ಇದ್ದರು.


 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT