ಶನಿವಾರ, ಫೆಬ್ರವರಿ 29, 2020
19 °C

ಕಾಂಗ್ರೆಸ್‌ನಿಂದ ಮೂವರು ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಪಿಸಿಸಿ ಕಚೇರಿ ಎದುರು ನಡೆದ ಪ್ರತಿಭಟನೆ ನೇತೃತ್ವ ವಹಿಸಿದ್ದ ಮೂವರು ಮುಖಂಡರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಆರ್.ಮಂಜುನಾಥ್, ಮಾಜಿ ಕಾರ್ಯದರ್ಶಿಗಳಾದ ಎ.ಕೆಂಚೇಗೌಡ, ಎಂ.ಜಿ.ಬಲರಾಮ್ ಅವರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಮಾನತು ಮಾಡಿದ್ದಾರೆ.

ಜ.20ರಂದು ಕಚೇರಿ ಎದುರು ಪಕ್ಷದ ನಾಯಕರು ಹಾಗೂ ನಾಯಕತ್ವದ ವಿರುದ್ಧ ಕೆಲವರು ಘೋಷಣೆ ಕೂಗಿ, ಭಿತ್ತಿಪತ್ರ ಪ್ರದರ್ಶಿಸಿದ್ದರು. ಇದನ್ನು ಎಐಸಿಸಿ ಗಂಭೀರವಾಗಿ ತೆಗೆದುಕೊಂಡಿದ್ದು, ಪಕ್ಷ ವಿರೋಧಿ ಚಟುವಟಿಕೆ ಎಂದೇ ಪರಿಗಣಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು