‘ಕೈ’ ತಪ್ಪಿದ ಟಿಕೆಟ್: ಕಾಂಗ್ರೆಸ್‌ ಕಚೇರಿಗೆ ಕಲ್ಲು ತೂರಾಟ

7

‘ಕೈ’ ತಪ್ಪಿದ ಟಿಕೆಟ್: ಕಾಂಗ್ರೆಸ್‌ ಕಚೇರಿಗೆ ಕಲ್ಲು ತೂರಾಟ

Published:
Updated:
Deccan Herald

ಶಿವಮೊಗ್ಗ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ತಮ್ಮ ನಾಯಕರಿಗೆ ಟಿಕೆಟ್‌ ಕೈ ತಪ್ಪಿದ ಹಿನ್ನಲೆಯಲ್ಲಿ ಬೇಸರಗೊಂಡ ಅಭಿಮಾನಿಗಳು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭಾನುವಾರ ಕಲ್ಲು ತೂರಿ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಗೆ ಅನೇಕರು ಕಾಂಗ್ರೆಸ್‌ ಪಕ್ಷದಿಂದ ಟಿಕೆಟ್‌ ಆಕಾಂಕ್ಷಿಗಳಾಗಿದ್ದರು. ತಮ್ಮ ನಾಯಕರಿಗೆ ಟಿಕೆಟ್‌ ಸಿಗುವ ಭರವಸೆಯಿಂದಲೇ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕ್ಷೇತ್ರದಾದ್ಯಂತ ಸಂಚರಿಸಿ ಪ್ರಚಾರ ಕಾರ್ಯ ನಡೆಸಿದ್ದರು. ಆದರೆ ಕೊನೆ ಗಳಿಕೆಯಲ್ಲಿ ಪಕ್ಷ ತಮ್ಮ ನಾಯಕರಿಗೆ ಟಿಕೆಟ್‌ ನೀಡದೇ ಅನ್ಯಾಯ ಮಾಡಿದೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರು.

ವಾರ್ಡ್ ನಂ.17ರ ಟಿಕೆಟ್ ಆಕಾಂಕ್ಷಿ ಆಗಿದ್ದ ಹಾಲಿ ಮಹಾನಗರ ಪಾಲಿಕೆ ಸದಸ್ಯ ವಿಶ್ವನಾಥ್ ಕಾಶಿ ಅವರಿಗೆ ಟಿಕೆಟ್‌ ಕೈತಪ್ಪಿರುವ ವಿಚಾರ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳ ಗುಂಪು ಪಕ್ಷದ ಕಚೇರಿ ಮುಂದೆ ಜಮಾಯಿಸಿ ಟೈರ್‌ ಸುಟ್ಟು ಆಕ್ರೋಶ ವ್ಯಕ್ತಪಡಿಸಿತು.

ಯುವ ಕಾಂಗ್ರೆಸ್‌ ಆಕ್ರೋಶ
ಈ ಬಾರಿಯ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಿವಿಧ ವಾರ್ಡ್‌ಗಳಿಂದ ಪಕ್ಷದ ಟಿಕೆಟ್‌ ಆಕಾಂಕ್ಷಿಗಳಾಗಿದ್ದ ಯುವ ಕಾಂಗ್ರೆಸ್ ನಾಯಕರಿಗೆ ಟಿಕೆಟ್‌ ಕೈತಪ್ಪಿದೆ. ವಾರ್ಡ್‌ ನಂ.20ರಲ್ಲಿ ಯೂಥ್‌ ಕಾಂಗ್ರೆಸ್‌ನ ಹಿರಿಯ ನಾಯಕ ರಂಗನಾಥ್ ಅವರ ಪತ್ನಿ ರೇಖಾ ರಂಗನಾಥ್‌, ವಾರ್ಡ್‌ ನಂ. 11ರಲ್ಲಿ ಜಿಲ್ಲಾ ಯೂಥ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರವೀಣ್‌ಕುಮಾರ್ ಹಾಗೂ ವಾರ್ಡ್‌ 8ರಿಂದ ನಗರ ಯುವ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ.ಗಿರೀಶ್‌ ಪ್ರಬಲ ಆಕಾಂಕ್ಷಿಗಳಾಗಿದ್ದರು.

ಆದರೆ, ಕೊನೆ ಗಳಿಗೆಯಲ್ಲಿ ಈ ಮೂವರು ನಾಯಕರಿಗೆ ಟಿಕೆಟ್‌ ಕೈತಪ್ಪಿದ್ದು, ಇದರಿಂದ ಆಕ್ರೋಶಗೊಂಡ ಅವರ ಅಭಿಮಾನಿಗಳು ಪಕ್ಷದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಒಬ್ಬನು ಕಚೇರಿಯ ಕಿಟಕಿ ಗಾಜಿಗೆ ಕಲ್ಲು ತೂರಿದ್ದಾನೆ. ಸ್ಥಳಕ್ಕರ ಧಾವಿಸಿದ ಜಯನಗರ ಪೊಲೀಸರು ಚಂದ್ರು ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 0

  Sad
 • 1

  Frustrated
 • 1

  Angry

Comments:

0 comments

Write the first review for this !