ಬುಧವಾರ, ಆಗಸ್ಟ್ 12, 2020
21 °C

ಡಿ.ಕೆ. ಶಿ‌ವಕುಮಾರ್‌ಗೆ ಅಧಿಕಾರ ಹಸ್ತಾಂತರಿಸಿದ ದಿನೇಶ್ ಗುಂಡೂರಾವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣ ಸಮಾರಂಭ ಹಲವು ನಾಯಕರು ಜ್ಯೋತಿ ಬೆಳಗುವ ಮೂಲಕ ಆರಂಭವಾಯಿತು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರ ಸ್ವಾಗತ ಭಾಷಣದ ಬಳಿಕ ಐದೈದು ನಾಯಕರ ತಂಡಗಳಿಂದ ಜ್ಯೋತಿ ಬೆಳಗಿಸಲಾಯಿತು.

ಕೊರೊನಾ ಕಾರಣಕ್ಕೆ ಅಂತರ ಕಾಪಾಡುವ ಉದ್ದೇಶದಿಂದ ಈ ವ್ಯವಸ್ಥೆ ಮಾಡಲಾಗಿತ್ತು.

ರಾಜ್ಯದ 7,800 ಸ್ಥಳಗಳಲ್ಲಿ ಈ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ವೇದಿಕೆಯ ಸುತ್ತಲೂ ಬೃಹತ್ ಡಿಜಿಟಲ್ ಪರದೆಗಳನ್ನು ಅಳವಡಿಸಲಾಗಿದೆ. 

ಕಚೇರಿಯತ್ತ ಬರುವ ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿದೆ.

ಸುಮಾರು 200 ಮಂದಿಗಷ್ಟೇ ಕೆಪಿಸಿಸಿ ಸಭಾಂಗಣದೊಳಗೆ ಪ್ರವೇಶಿಸುವ ಅವಕಾಶ ನೀಡಲಾಗಿದೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು