ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಂಗು ಬೆಳೆಗಾರರ ಪ್ರೋತ್ಸಾಹಧನಕ್ಕೆ ₹25 ಕೋಟಿ

Last Updated 1 ಏಪ್ರಿಲ್ 2019, 20:26 IST
ಅಕ್ಷರ ಗಾತ್ರ

ಬೆಂಗಳೂರು: ಸಂಪೂರ್ಣವಾಗಿ ಒಣಗಿರುವ ಹಾಗೂ ಅನುತ್ಪಾದಕ ತೆಂಗಿನ ಮರಗಳನ್ನು ಹೊಂದಿರುವ ತೆಂಗಿನ ಬೆಳೆಗಾರರಿಗೆ ಪ್ರೋತ್ಸಾಹಧನ ನೀಡಲು ತೋಟಗಾರಿಕೆ ಇಲಾಖೆ ₹25 ಕೋಟಿ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ 44.54 ಲಕ್ಷ ತೆಂಗಿನ ಮರಗಳು ಒಣಗಿದ್ದು, ₹178 ಕೋಟಿ ಪ್ರೋತ್ಸಾಹಧನ ವಿತರಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿತ್ತು. ಪ್ರತಿ ತೆಂಗಿನ ಮರಕ್ಕೆ ₹400 ನೀಡಲಾಗುತ್ತಿದೆ. ಡಿಬಿಟಿ (ನೇರ ನಗದು ಪಾವತಿ) ಮೂಲಕ ಹಣ ಪಾವತಿ ಮಾಡಲಾಗುತ್ತಿದ್ದು, ಈವರೆಗೆ ₹108 ಕೋಟಿ ಸಹಾಯಧನ ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT