ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜರ್ಮನಿ ಕಚೇರಿಯಲ್ಲಿ ‘ಕನ್ನಡಿಗ ಕಾನ್‌ಸ್ಟೆಬಲ್’

Last Updated 24 ಆಗಸ್ಟ್ 2019, 19:45 IST
ಅಕ್ಷರ ಗಾತ್ರ

ಬೆಂಗಳೂರು: ಹಲಸೂರು ಗೇಟ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಕಾನ್‌ಸ್ಟೆಬಲ್ ಪಿ.ವಿ. ವಿಶ್ವನಾಥ್ ಅವರನ್ನು ಜರ್ಮನಿಯಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ವಿಶ್ವನಾಥ್ ಕೆಲಸದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಕೇಂದ್ರ ಗೃಹ ಇಲಾಖೆಯೇ ಅವರನ್ನು ರಾಯಭಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿ ಈಚೆಗೆ ಆದೇಶ ಹೊರಡಿಸಿತ್ತು. ಅದರಂತೆ ವಿಶ್ವನಾಥ್, ಜರ್ಮನಿಯಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ.

ಆ ಬಗ್ಗೆ ಟ್ವೀಟ್ ಮಾಡಿರುವ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ‘ಪಿ.ವಿ. ವಿಶ್ವನಾಥ್ ಅವರ ಸಾಧನೆಗೆ ನಾವೆಲ್ಲರೂ ಹೆಮ್ಮೆಪಡುತ್ತೇವೆ’ ಎಂದಿದ್ದಾರೆ. ಅದನ್ನು ಮರು ಟ್ವೀಟ್ ಮಾಡಿರುವ 175 ಮಂದಿ, ‘ಕನ್ನಡಿಗರಾದ ವಿಶ್ವನಾಥ್, ಜರ್ಮನಿಯಲ್ಲಿ ಕೆಲಸ ಮಾಡುತ್ತಿರುವುದು ಸಂತೋಷ ತಂದಿದೆ’ ಎಂದು ಹೊಗಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT