ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಲಪತಿಗಳ ನೇಮಕಾತಿಗೆ ಶೋಧನಾ ಸಮಿತಿ ರಚನೆ

Last Updated 13 ಜುಲೈ 2019, 14:41 IST
ಅಕ್ಷರ ಗಾತ್ರ

ಕಲಬುರ್ಗಿ: ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯ ಹಾಗೂ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಗಳಿಗೆ ಹೊಸ ಕುಲಪತಿ ನೇಮಕಾತಿಗಾಗಿ ಎರಡು ಶೋಧನಾ ಸಮಿತಿಗಳನ್ನು ರಚಿಸಲಾಗಿದೆ.

ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಗುರುವಾರವೇ ಆದೇಶ ಹೊರಡಿಸಿದ್ದು, ಎರಡೂ ಶೋಧನಾ ಸಮಿತಿಗಳಲ್ಲಿ ತಲಾ ನಾಲ್ವರು ಸದಸ್ಯರು ಇದ್ದಾರೆ.‌ ಈ ಸಮಿತಿಯು ಎರಡೂ ವಿಶ್ವವಿದ್ಯಾಲಯಗಳಿಗೆ ತಲಾ ಮೂರವನ್ನು ಕುಲಪರಿಗಾಗಿ ಶಿಫಾರಸು ಮಾಡಲಿದೆ.

ನವದೆಹಲಿಯ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಸಿಬ್ಬಂದಿ ತರಬೇತಿ ಮತ್ತು ಸಂಶೋಧನಾ ಸಂಸ್ಥೆಯ ಮಾಜಿ ನಿರ್ದೇಶಕ ಪ್ರೊ.ಸಂತೋಷ ಪಾಂಡಾ (ಚೇರ್ಮನ್‌), ಕರ್ನಾಟಕ ವಿಶ್ವವಿದ್ಯಾಲಯ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ವೇದಮೂರ್ತಿ ಎ.ಬಿ. (ರಾಜ್ಯಪಾಲರ ನಾಮನಿರ್ದೇಶಿತ ಸದಸ್ಯ), ಹರ್‍ಯಾಣದ ಸೋನಪೇಟ್‌ ಭಗತ್‌ ಫೂಲ್‌ಸಿಂಗ್ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸುಷ್ಮಾ ಯಾದವ್‌ (ಯುಜಿಸಿ ನಾಮನಿರ್ದೇಶಿತ ಸದಸ್ಯೆ), ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ವೆಂಕಟರಾಮ್ಯ (ಸಿಂಡಿಕೇಟ್‌ ಸದಸ್ಯ) ಅವರನ್ನೊಳಗೊಂಡ ಸಮಿತಿಯು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ನೇಮಕಾತಿಗೆ ನಿಯೋಜನೆಗೊಂಡಿದೆ.

ಅದೇ ರೀತಿ, ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿ ನೇಮಕಾತಿ ಸಮಿತಿಯಲ್ಲಿ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತಕುಮಾರ (ಚೇರ್ಮನ್‌), ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಂ.ಮಹಾದೇವಪ್ಪ (ರಾಜ್ಯಪಾಲರ ನಾಮನಿರ್ದೇಶಿತ ಸದಸ್ಯ), ಯುಜಿಸಿ ಮಾಜಿ ಸದಸ್ಯ ಪ್ರೊ.ವಿ.ಎಸ್‌. ಚೌಹಾಣ (ಯುಜಿಸಿ ನಾಮನಿರ್ದೇಶಿತ ಸದಸ್ಯ),ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಜೋಗನ್‌ ಶಂಕರ್‌ (ಸಿಂಡಿಕೇಟ್‌ ಸದಸ್ಯ) ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT