ಬುಧವಾರ, ಡಿಸೆಂಬರ್ 2, 2020
17 °C

ಕೈಗಾರಿಕಾ ಟೌನ್‌ಶಿಪ್‌ ನಿರ್ಮಾಣ: ಸಚಿವ ಜಗದೀಶ ಶೆಟ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯದ ಹಲವು ನಗರಗಳು ಹಾಗೂ ಕೈಗಾರಿಕಾ ಪ್ರದೇಶಗಳಲ್ಲಿ ಮಾದರಿ ಟೌನ್‌ಶಿಪ್ ನಿರ್ಮಾಣ ಮಾಡಲಾಗುವುದು’ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.

‘ಕಾಸಿಯಾ’ ಸಂಸ್ಥೆ ಶನಿವಾರ ಆಯೋಜಿಸಿದ್ದ ಎಂಎಸ್‌ಎಂಇ ದಿನಾಚರಣೆಯಲ್ಲಿ ಕೋವಿಡ್‌ -19ರ ಉದ್ಯೋಗ ಸಹಾಯವಾಣಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಬೆಂಗಳೂರು ನಗರ ಹಾಗೂ ಯಾವ ಜಿಲ್ಲೆಗಳಲ್ಲಿ ಟೌನ್‌ಶಿಪ್‌ಗಳ ನಿರ್ಮಾಣವಾಗಬೇಕಿದೆ ಎಂಬ ಬಗ್ಗೆ ವರದಿಯನ್ನು ತಯಾರಿಸಲು ಹಾಗೂ ಅದರ ಭೌಗೋಳಿಕ ನಕ್ಷೆ ಹೊಂದಿರುವ ಸಮಗ್ರ‌ ಪ್ರಸ್ತಾವನೆಯನ್ನು ಸಿದ್ದಪಡಿಸುವಂತೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ. ನಗರಾಭಿವೃದ್ಧಿ ಇಲಾಖೆಯ ಒಪ್ಪಿಗೆಯನ್ನು ಪಡೆದುಕೊಂಡು ಶೀಘ್ರದಲ್ಲೇ ಸಚಿವ ಸಂಪುಟದ ಮುಂದೆ ತರಲಾಗುವುದು’ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು