ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್ 31ರವರೆಗೂ ಈಗಿರುವ ಎಲ್ಲ ನಿರ್ಬಂಧಗಳ ಮುಂದುವರಿಕೆ: ಬಿ.ಎಸ್. ಯಡಿಯೂರಪ್ಪ

Last Updated 18 ಮಾರ್ಚ್ 2020, 11:31 IST
ಅಕ್ಷರ ಗಾತ್ರ

ಬೆಂಗಳೂರು: ಮಾರ್ಚ್ 31ರವರೆಗೆ ಈಗಿರುವ ಎಲ್ಲ ನಿರ್ಬಂಧಗಳು ಮುಂದುವರಿಯುತ್ತವೆ. ಸಚಿವರ ನೇತೃತ್ವದಲ್ಲಿ ನಾಲ್ಕು ಕಾರ್ಯ ಪಡೆ ರಚಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಆರೋಗ್ಯ ಸಚಿವ ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಡಾ.ಅಶ್ವತ್ಥ್ ನಾರಾಯಣ್, ಬಸವರಾಜ್ ಬೊಮ್ಮಾಯಿ, ಡಾ.ಸುಧಾಕರ್ ಹಾಗೂ ಮುಖ್ಯ ಕಾರ್ಯದರ್ಶಿ ಸಹ ಟಾಸ್ಕ್ ಫೋರ್ಸ್ ಸದಸ್ಯರಾಗಿರುತ್ತಾರೆ. ಕೊರೊನಾ ವೈರಸ್ ಜತೆಗೆ ಹಕ್ಕಿ ಜ್ವರ ಹಾಗೂ ಮಂಗನ ಕಾಯಿಲೆ ಬಗ್ಗೆ ನಿಗಾ ವಹಿಸಿ ಅಗತ್ಯ ಕ್ರಮ ಕೈಗೊಳ್ಳುವ ಕೆಲಸವನ್ನು ಮಾಡಲಿದೆ. ಕೊರೊನಾ ತಡೆಗೆ 200 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮಾರ್ಚ್ 31 ರವರೆಗೆ ಈಗಿರುವ ನಿರ್ಬಂಧಗಳು ಮುಂದುವರೆಯಲಿವೆ. ವಿಧಾನಸೌಧ, ವಿಕಾಸಸೌಧಕ್ಕೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣ ನಿರ್ಬಂಧಿಸಲು ತೀರ್ಮಾನಿಸಲಾಗಿದೆ ಎಂದರು.

ಸಾರ್ವಜನಿಕ ಸಭೆ, ಸಮಾರಂಭಗಳು, ಅದ್ದೂರಿ ಮದುವೆಗಳು, ಸಿನಿಮಾ ಪ್ರದರ್ಶನ, ಮಾಲ್‌ಗಳು, ಪಬ್ ಮೇಲಿನ ನಿರ್ಬಂಧ ಮಾರ್ಚ್ 31ರವರೆಗೆ ಮುಂದುವರಿಯಲಿದೆ. ವಿವಿಧ ದೇಶಗಳಿಂದ ಬರುವ ಪ್ರಯಾಣಿಕರ ತಪಾಸಣೆ ಕಡ್ಡಾಯ ಮಾಡಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT