ಶನಿವಾರ, ಜುಲೈ 24, 2021
25 °C

ವಿವಿಧೆಡೆ ಮುಂದುವರಿದ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಕರಾವಳಿಯಲ್ಲಿ ಮುಂಗಾರು ಚುರುಕಾಗಿದೆ.

ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನಲ್ಲಿ ಎರಡು ಮನೆಗಳಿಗೆ ಹಾನಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.

ಎರಡೂ ಜಿಲ್ಲೆಗಳಲ್ಲಿ ಜುಲೈ 16ರಿಂದ 20ರವರೆಗೆ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿರುವ ಹವಾಮಾನ ಇಲಾಖೆ, ‘ಯೆಲ್ಲೊ ಅಲರ್ಟ್‌’ ಘೋಷಿಸಿದೆ. ಈ ಅವಧಿಯಲ್ಲಿ ವೇಗವಾಗಿ ಗಾಳಿ ಬೀಸಲಿದ್ದು, 6ರಿಂದ 11 ಸೆಂ.ಮೀ.ಗೂ ಹೆಚ್ಚಿನ ಮಳೆ ಬೀಳಬಹುದು ಎಂದು ಅಂದಾಜಿಸಲಾಗಿದೆ. ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಮಳೆ ಮುಂದುವರಿದಿದೆ. ಕೊಡಗು ಜಿಲ್ಲೆಯ ಮಡಿಕೇರಿ, ತಲಕಾವೇರಿ ಹಾಗೂ ಭಾಗಮಂಡಲ, ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಹೆತ್ತೂರಿನಲ್ಲಿ ಸಾಧಾರಣ ಮಳೆಯಾಗಿದೆ. ಶಿವಮೊಗ್ಗ ನಗರ ಸುತ್ತಮುತ್ತ ತುಂತುರು ಮಳೆಯಾಗಿದೆ. ದಾವಣಗೆರೆ ನಗರದಲ್ಲೂ ಆಗೀಗ ತುಂತುರು ಮಳೆಯಾಗಿದೆ. ಧಾರವಾಡ, ಹಾವೇರಿ ಜಿಲ್ಲೆಯಲ್ಲಿ ಸಾಧಾರಣ ಮಳೆ ಆಗಿದೆ. ಬೆಳಗಾವಿ, ಖಾನಾಪುರ, ರಾಮದುರ್ಗದಲ್ಲಿ ದಿನವಿಡೀ ಜಿಟಿಜಿಟಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲ್ಲೂಕುಗಳಲ್ಲಿ ಮಳೆಯ ಪ್ರಮಾಣ ತಗ್ಗಿದೆ. ಆದರೆ, ಘಟ್ಟ ಪ್ರದೇಶಗಳಲ್ಲಿ ಮಳೆ ಮುಂದುವರಿದಿದೆ. 

ಕಲಬುರ್ಗಿ ನಗರದಲ್ಲಿ ಸೋಮವಾರ ಮಧ್ಯಾಹ್ನ ಕೆಲ ಹೊತ್ತು ಬಿರುಸಿನ ಮಳೆ ಸುರಿಯಿತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು