ಗುರುವಾರ , ಫೆಬ್ರವರಿ 25, 2021
29 °C

ಶಿವಾಜಿನಗರದ ಹೋಟೆಲ್‌ನ ಹೌಸ್‌ ಕೀಪಿಂಗ್ ಸಿಬ್ಬಂದಿಗೆ ಕೊರೊನಾ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಶಿವಾಜಿನಗರದಲ್ಲಿ ಹೋಟೆಲ್ ಒಂದರ ಹೌಸ್ ಕೀಪಿಂಗ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ.

45 ವರ್ಷದ ವ್ಯಕ್ತಿ ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆಯಿಂದ( ಐಎಲ್‌ಐ) ಬಳಲುತ್ತಿದ್ದರು. ಹಾಗಾಗಿ ಅವರ ರಕ್ತ ಹಾಗೂ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರ ವರದಿ ಮಂಗಳವಾರ ಬಂದಿದ್ದು, ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಅವರು ಕಾರ್ಯನಿರ್ವಹಿಸುತ್ತಿದ್ದ ಹೋಟೆಲ್‌ನಲ್ಲಿ 70 ಕ್ಕೂ ಅಧಿಕ ಮಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಈಗ ಹೋಟೆಲ್‌ಗೆ ತಾತ್ಕಾಲಿಕವಾಗಿ ಬೀಗ ಹಾಕಿ, ಅಲ್ಲಿದ್ದವರನ್ನು ಇನ್ನೊಂದು ಹೋಟೆಲ್‌ಗೆ ಸ್ಥಳಾಂತರ ಮಾಡಲಾಗಿದೆ. ಅವರಲ್ಲಿ ಯಾರಿಗೂ ಸೋಂಕು ಹರಡಿಲ್ಲ ಎನ್ನುವುದು ಪ್ರಾಥಮಿಕ ತಪಾಸಣೆಯಿಂದ ತಿಳಿದುಬಂದಿದೆ.

'ಸೋಂಕಿತ ಹೌಸ್ ಕೀಪಿಂಗ್ ಸಿಬ್ಬಂದಿಯ ಪ್ರಯಾಣದ ಇತಿಹಾಸವನ್ನು ಸಂಗ್ರಹಿಸಲಾಗುತ್ತಿದೆ' ಎಂದು ಬಿಬಿಎಂಪಿ ಮುಖ್ಯ ಆರೋಗ್ಯ ಅಧಿಕಾರಿ ಡಾ. ವಿಜಯೇಂದ್ರ ತಿಳಿಸಿದರು.

ನಗರದಲ್ಲಿ ಮಂಗಳವಾರ ಮೂರು ಕೋವಿಡ್ ಪ್ರಕರಣಗಳು ವರದಿಯಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು