ಸೋಮವಾರ, ಜುಲೈ 26, 2021
21 °C

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ಕದ ತಟ್ಟಿದ ಕೊರೊನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯ ನಿರ್ವಹಿಸುವ ಮಹಿಳಾ ಕಾನ್‌ಸ್ಟೇಬಲ್‌ವೊಬ್ಬರ ಪತಿಗೆ ಕೊರೊನಾ ಪಾಸಿಟವ್‌ ಆಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಮ್ಮ ಎಲ್ಲ ಅಧಿಕೃತ ಸಭೆಗಳನ್ನು ವಿಧಾನಸೌಧಕ್ಕೆ ಸ್ಥಳಾಂತರಿಸಿದರು.

ಎರಡು ದಿನಗಳ ಹಿಂದೆ ಕಾರವಾನ್‌ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಈ ಮಹಿಳಾ ಕಾನ್‌ಸ್ಟೇಬಲ್ ಭಾಗವಹಿಸಿದ್ದರು.

ಪತಿಯಲ್ಲಿ ಕೊರೊನಾ ಪಾಸಿಟವ್ ಕಂಡು ಬಂದ ಹಿನ್ನೆಲೆಯಲ್ಲಿ ಈಗ ಪತ್ನಿಯನ್ನೂ ಪರೀಕ್ಷೆಗೆ ಒಳಪಡಿಸಿದ್ದು, ವರದಿ ಬರಬೇಕಾಗಿದೆ. ಇವರ ಜತೆ ಕಾರ್ಯ ನಿರ್ವಹಿಸಿದ ಎಲ್ಲ ಸಿಬ್ಬಂದಿಯನ್ನೂ ಕೊರೊನಾ ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು