ಮಂಗಳವಾರ, ಜುಲೈ 14, 2020
28 °C

ಕೊರೊನಾ: ರಾಜ್ಯದಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌–19ಕ್ಕೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ 60 ವರ್ಷದ ವ್ಯಕ್ತಿಯೊಬ್ಬರು ಕೊನೆಯುಸಿರೆಳೆದಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಶುಕ್ರವಾರ  9 ‌ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 64ಕ್ಕೆ ತಲುಪಿದೆ.

ಕಲಬುರ್ಗಿಯ ಮೊಹ್ಮದ್ ಹುಸೇನ್ ಸಿದ್ಧಿಕಿ ಕಳೆದ ಮಾ.10ರಂದು ಈ ಸೋಂಕಿನಿಂದ ಮೃತಪಟ್ಟಿದ್ದರು. ಮೆಕ್ಕಾದಿಂದ ಬೆಂಗಳೂರಿಗೆ ಬಂದಿದ್ದ ಚಿಕ್ಕಬಳ್ಳಾಪುರದ 70 ವರ್ಷದ ವೃದ್ಧೆ ಚಿಕಿತ್ಸೆ ಫಲಿಸದೆಯೇ ಮಾ.24 ನಿಧನರಾಗಿದ್ದರು. ಈ ಇಬ್ಬರೂ ಕೊರೊನಾ ಸೋಂಕಿನಿಂದಲೇ ಸತ್ತಿದ್ದಾರೆ ಎನ್ನುವುದು ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ದೃಢಪಟ್ಟಿತ್ತು. ಶುಕ್ರವಾರ ಮೃತಪಟ್ಟ ಶಿರಾದ ನಿವಾಸಿ ಮಾ.13 ರಂದು ದೆಹಲಿಗೆ ರೈಲಿನಲ್ಲಿ ಹೋಗಿದ್ದರು.

ಇವರೊಂದಿಗೆ ನೇರ ಸಂಪರ್ಕ ಹೊಂದಿದ್ದ 24 ಮಂದಿಯನ್ನು ಗುರುತಿಸಿ, ಪ್ರತ್ಯೇಕಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ 10 ತಿಂಗಳ ಗಂಡು ಮಗುವಿಗೆ ಸೋಂಕು ತಗುಲಿದೆ. ಈ ಮಗು ಯಾವುದೇ ಕೋವಿಡ್‌–19 ಪ್ರಭಾವಿತ ದೇಶಕ್ಕೆ ಪ್ರಯಾಣಿಸಿದ ಹಿನ್ನೆಲೆ ಹೊಂದಿಲ್ಲ. ಆದರೆ,  ಪೋಷಕರು ಮಗುವಿನೊಂದಿಗೆ ಕೆಲದಿನಗಳ ಹಿಂದೆ ಕೇರಳಕ್ಕೆ ಭೇಟಿ ನೀಡಿದ್ದರು. ಹೊಸದಾಗಿ ಬೆಂಗಳೂರಿನಲ್ಲಿ 4, ತುಮಕೂರು, ಉತ್ತರ ಕನ್ನಡ, ದಾವಣಗೆರೆಯಲ್ಲಿ ತಲಾ 1 ಹಾಗೂ ದಕ್ಷಿಣ ಕನ್ನಡದಲ್ಲಿ ಎರಡು ಪ್ರಕರಣಗಳು ವರದಿಯಾಗಿವೆ. 12 ಮಂದಿಯನ್ನು ಸೋಂಕು ಶಂಕೆ ಹಿನ್ನೆಲೆಯಲ್ಲಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು