ಸೋಮವಾರ, ಮಾರ್ಚ್ 8, 2021
26 °C

ಬಳ್ಳಾರಿ | ಸಂಡೂರು ಮಹಿಳೆಗೆ ಕೊರೊನಾ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಂಡೂರು: ಇದುವರೆಗೆ ಬಳ್ಳಾರಿ, ಸಿರುಗುಪ್ಪ ಮತ್ತು ಹೊಸಪೇಟೆಯಲ್ಲಷ್ಟೇ ಕಾಣಿಸಿಕೊಂಡಿದ್ದ ಕೊರೊನಾ ಸೋಂಕು, ಗಣಿ ತಾಲ್ಲೂಕಾದ ಸಂಡೂರಿಗೂ ಕಾಲಿಟ್ಟಿದೆ. 

ಕೃಷ್ಣಾನಗರದ ಮಹಿಳೆಯೊಬ್ಬರಿಗೆ ಸೋಂಕು ತಗುಲಿದೆ ಎಂಬುದನ್ನು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ಖಚಿತಪಡಿಸಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯು 14ರಿಂದ 15ಕ್ಕೆ ಏರಿದಂತಾಗಿದೆ. ಸೋಂಕಿತ ಮಹಿಳೆಯನ್ನು ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಿಳೆಗೆ ಹೇಗೆ ಸೋಂಕು ತಗುಲಿತು ಎಂಬ ಬಗ್ಗೆ ಜಿಲ್ಲಾಡಳಿತ ಮಾಹಿತಿ ಸಂಗ್ರಹಿಸುತ್ತಿದೆ. ಇದೇ ವೇಳೆ, ಸೋಂಕಿತ ಮಹಿಳೆಯೊಂದಿಗೆ ಪ್ರಥಮ ಹಂತದ ಸಂಪರ್ಕದಲ್ಲಿದ್ದ ಕುಟುಂಬದ ಸದಸ್ಯರನ್ನು ತಾಲ್ಲೂಕು ಆರೋಗ್ಯಾಧಿಕಾರಿ ನೇತೃತ್ವದಲ್ಲಿ ಗುರುವಾರ ರಾತ್ರಿಯೇ ಕ್ವಾರಂಟೈನ್‌ಗೆ ಕಳಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು