ಭಾನುವಾರ, ಜೂಲೈ 5, 2020
27 °C

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,533

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಒಂದೇ ದಿನ 115 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 2,533ಕ್ಕೆ ಏರಿಕೆಯಾಗಿದೆ. 

ಹೊಸದಾಗಿ ವರದಿಯಾದ ಪ್ರಕರಣಗಳಲ್ಲಿ 95 ಮಂದಿ ಅನ್ಯ ರಾಜ್ಯದವರಾಗಿದ್ದಾರೆ. ಇಬ್ಬರು ವಿದೇಶದಿಂದ ಬಂದವರಾಗಿದ್ದಾರೆ. ಮಹಾರಾಷ್ಟ್ರದಿಂದ ಬಂದವರಲ್ಲಿ ಮತ್ತೆ 85 ಮಂದಿ ಸೋಂಕಿತರಾಗಿದ್ದಾರೆ. ಇದರಿಂದಾಗಿ ಈವರೆಗೆ ರಾಜ್ಯದಲ್ಲಿ ವರದಿಯಾದ ಒಟ್ಟು ಪ್ರಕರಣಗಳಲ್ಲಿ 1,128 ಮಂದಿ ಮಹಾರಾಷ್ಟ್ರಕ್ಕೆ ಪ್ರಯಾಣ ಮಾಡಿದ ಇತಿಹಾಸ ಹೊಂದಿದವರಾಗಿದ್ದಾರೆ. 

ಉಡುಪಿಯಲ್ಲಿ 29, ದಕ್ಷಿಣ ಕನ್ನಡದಲ್ಲಿ 24, ಹಾಸನದಲ್ಲಿ 13, ಬೀದರ್‌ನಲ್ಲಿ 12, ಬೆಂಗಳೂರಿನಲ್ಲಿ 9, ಯಾದಗರಿಯಲ್ಲಿ 7,
ಚಿತ್ರದುರ್ಗದಲ್ಲಿ 6, ಕಲಬುರ್ಗಿಯಲ್ಲಿ 5, ಹಾವೇರಿಯಲ್ಲಿ 4, ಚಿಕ್ಕಮಗಳೂರಿನಲ್ಲಿ 3, ವಿಜಯಪುರದಲ್ಲಿ 2 ಹಾಗೂ ರಾಯಚೂರಿನಲ್ಲಿ 1 ಪ್ರಕರಣ ಹೊಸದಾಗಿ ವರದಿಯಾಗಿದೆ. 

ಚಿಕ್ಕಮಗಳೂರಿನ ತರೀಕೆರೆಯ ಎಂಟು ತಿಂಗಳ ಗರ್ಭಿಣಿಗೆ ಸೋಂಕು ತಗುಲಿಲ್ಲ ಎನ್ನುವುದು ಎರಡನೇ ಬಾರಿ ನಡೆಸಿದ ಕೋವಿಡ್ ಪರೀಕ್ಷೆಯಿಂದ ದೃಢಪಟ್ಟಿದೆ. ಕೆಲದಿನಗಳ ಹಿಂದೆ ಪ್ರಯೋಗಾಲಯದ ಲೋಪದಿಂದ ಅವರಿಗೆ ಸೋಂಕು ತಗುಲಿದೆ ಎಂಬ ವರದಿ ಬಂದಿತ್ತು. ಉಡುಪಿಯಲ್ಲಿ ಸೋಂಕಿತರಾದವರಲ್ಲಿ 26 ಮಂದಿ ಹಾಗೂ ದಕ್ಷಿಣ ಕನ್ನಡದ ಎಲ್ಲರೂ  ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ.  

ಚಿತ್ರದುರ್ಗದ ಚಳ್ಳಕೆರೆ ತಾಲ್ಲೂಕಿನಲ್ಲಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇದ್ದ ವಲಸೆ ಕಾರ್ಮಿಕರಿಗೆ ಸೋಂಕು ತಗುಲಿದೆ. ಇದರಿಂದಾಗಿ ಅಲ್ಲಿ ಈವರೆಗೆ 27 ವಲಸೆ ಕಾರ್ಮಿಕರು ಸೋಂಕಿತರಾಗಿದ್ದಾರೆ. ವಿಜಯಪುರದಲ್ಲಿ ಮಹಾರಾಷ್ಟ್ರದಿಂದ ವಾಪಸ್ ಆಗಿದ್ದ 23 ಹಾಗೂ 32 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ. ಬೀದರ್‌ನಲ್ಲಿ ಸೋಂಕಿತ 12 ಮಂದಿ, ಯಾದಗಿರಿಯಲ್ಲಿ 7 ಮಂದಿ ಹಾಗೂ ಕಲಬುರ್ಗಿಯಲ್ಲಿ 5 ಮಂದಿ ಮಹಾರಾಷ್ಟ್ರದಿಂದಲೇ ಬಂದವರಾಗಿದ್ದಾರೆ. ಬೆಂಗಳೂರಿನಲ್ಲಿ ಸೌದಿ ಅರೇಬಿಯಾ ಹಾಗೂ ಕತಾರ್‌ನಿಂದ ಬಂದವರಿಗೆ ಸೋಂಕು ತಗುಲಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು