ಗುರುವಾರ , ಫೆಬ್ರವರಿ 20, 2020
23 °C

ಕೊರೊನಾ ಭೀತಿ: ಚೀನಾದಿಂದ ಮಂಡ್ಯಕ್ಕೆ ಮರಳಿದ ವಿದ್ಯಾರ್ಥಿನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಚೀನಾದ ವೈದ್ಯಕೀಯ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಕೊರೊನಾ ಸೋಂಕಿನ ಭಯದಿಂದ  ನಗರಕ್ಕೆ ಮರಳಿದ್ದು ಆಕೆಯ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ.

ಭಾನುವಾರ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಸ್ಥಳದಲ್ಲೇ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಆಕೆಯ ಆರೋಗ್ಯ ಚೆನ್ನಾಗಿದ್ದು ಯಾವುದೇ ಸೋಂಕು ಪತ್ತೆಯಾಗಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ವಿದ್ಯಾರ್ಥಿನಿ ವಿದ್ಯಾನಗರದ ನಿವಾಸಿಯಾಗಿದ್ದು ಹೆಚ್ಚಿನ ವಿವರ ನೀಡಲು ವೈದ್ಯರು ನಿರಾಕರಿಸಿದರು. ‘ಆರೋಗ್ಯ ಇಲಾಖೆಯ ಸೂಚನೆಯ ಮೇರೆಗೆ ವಿದ್ಯಾರ್ಥಿನಿಯ ಮೇಲೆ ನಿಗಾ ವಹಿಸಲಾಗಿದೆ. ಅವರು ಬಂದು ಮೂರು ದಿನವಾಗಿದ್ದು ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ಅಗತ್ಯ ಬಂದರೆ ಹೆಚ್ಚಿನ ತಪಾಸಣೆ ನಡೆಸಲಾಗುವುದು. ಕೊರೊನಾ ತಪಾಸಣೆಗಾಗಿ ಜಿಲ್ಲಾಸ್ಪತ್ರೆಯಲ್ಲಿ 10 ಹಾಸಿಗೆಯ ಒಂದು ಕೊಠಡಿ, ವೈದ್ಯರ ತಂಡ ಸಜ್ಜಾಗಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್‌.ಪಿ.ಮಂಚೇಗೌಡ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು