ಶನಿವಾರ, ಏಪ್ರಿಲ್ 4, 2020
19 °C

ಕ್ವಾರಂಟೈನ್ ಉಲ್ಲಂಘಿಸುವವರ ವಿರುದ್ಧ ಕ್ರಮ: ಸಚಿವ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Basavaraj Bommai

ಬೆಂಗಳೂರು: ಕೆಲವರು ಕ್ವಾರಂಟೈನ್ ಉಲ್ಲಂಘನೆ ಮಾಡುತ್ತಿದ್ದು, ಅಂತಹವರಿಗೆ ನೋಟಿಸ್ ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕ್ವಾರಂಟೈನ್‌ಗೆ ಒಳಗಾದವರನ್ನು ಸಂಪೂರ್ಣವಾಗಿ ಗುರುತಿಸುವ ಕೆಲಸ ಮುಂದುವರೆದಿದೆ. ಉಲ್ಲಂಘಿಸುವವರಿಗೆ ನೋಟಿಸ್ ನೀಡಲಾಗುವುದು. ಕ್ವಾರಂಟೈನ್ ಎಲ್ಲಿಂದ ಎಲ್ಲಿಯವರೆ ಇರುತ್ತದೆ ಎಂದು ನೋಟೀಸ್‌ನಲ್ಲಿ ಇರುತ್ತದೆ. 9 ಜಿಲ್ಲೆಗಳಲ್ಲಿ ಸೆಕ್ಷನ್ ಮುಂದುವರಿಲಿದೆ’ ಎಂದು ಹೇಳಿದರು.

ಖಾಸಗಿ ಬಸ್, ಟ್ಯಾಕ್ಸಿಗಳ ಓಡಾಟ ನಿಷೇಧಿಸಬೇಕೇ ಎಂಬ ಬಗ್ಗೆ ಸಂಜೆ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದರು.

9 ಜಿಲ್ಲೆಗಳಲ್ಲಿ ವಾಣಿಜ್ಯ ವ್ಯವಹಾರ ಇರುವುದಿಲ್ಲ. ನಿತ್ಯದ ಅವಶ್ಯಕತೆಗಳ ಮಾರಾಟಕ್ಕೆ ಮಾತ್ರ ಅವಕಾಶ ಎಂದು ಸಚಿವರು ಹೇಳಿದರು.

ಕೈದಿಗಳು ಜೈಲಿನ ಒಳಗೆ ಕ್ವಾರಂಟೈನ್‌ಗೆ ಒಳಗಾಗುತ್ತಿದ್ದಾರೆ. ಹೊಸ ಕೈದಿಗಳಿಗೆ ಪೂರ್ತಿ ಪ್ರಮಾಣದಲ್ಲಿ ಸ್ಕ್ರೀನಿಂಗ್ ಮಾಡಲಾಗುತ್ತದೆ ಎಂದೂ ಅವರು ತಿಳಿಸಿದರು.

ಕೈದಿಗಳು ನಿತ್ಯ 5 ಸಾವಿರ ಮಾಸ್ಕ್ ತಯಾರಿಸುತ್ತಿದ್ದಾರೆ. ಈಗಾಗಲೇ 17 ಸಾವಿರ ಮಾಸ್ಕ್ ನೀಡಿದ್ದಾರೆ. ಇನ್ನು ಒಂದು ವಾರ ಇಲಾಖೆಗೆ ಅಗತ್ಯವಿರುವ ಮಾಸ್ಕ್ ತಯಾರು ಮಾಡಲಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು