ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ಬಳ್ಳಾರಿಯಲ್ಲಿ ವಿದೇಶಗಳಿಂದ ಬಂದ 209 ಜನರಿಗೆ ಗೃಹಬಂಧನ

Last Updated 23 ಮಾರ್ಚ್ 2020, 10:04 IST
ಅಕ್ಷರ ಗಾತ್ರ

ಹೊಸಪೇಟೆ: ‘ವಿವಿಧ ದೇಶಗಳಿಂದ ಬಳ್ಳಾರಿ ಜಿಲ್ಲೆಗೆ 209 ಜನ ಹಿಂತಿರುಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ತಿಳಿಸಿದ್ದಾರೆ.

‘ಸೋಮವಾರ ಒಂದೇ ದಿನ 29 ಜನ ಬೇರೆ ದೇಶಗಳಿಂದ ಜಿಲ್ಲೆಗೆ ಬಂದಿದ್ದಾರೆ. ಎಲ್ಲರಿಗೂ ಮನೆಯಿಂದ ಹೊರ ಹೋಗದಂತೆ ಸೂಚಿಸಲಾಗಿದೆ. ಅವರ ಮೇಲೆ ನಿಗಾ ಇಡುವಂತೆ ಸಿಬ್ಬಂದಿಗೂ ಸೂಚಿಸಲಾಗಿದೆ. ಇದುವರೆಗೆ ಒಟ್ಟು 19 ಜನರ ಗಂಟಲಿನ ದ್ರವ ಪಡೆದು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 16 ಜನರ ಮಾದರಿ ನೆಗೆಟಿವ್‌ ಬಂದಿದ್ದು, ಮೂವರ ವರದಿ ಇನ್ನಷ್ಟೇ ಕೈಸೇರಬೇಕಿದೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT