ಭಾನುವಾರ, ಏಪ್ರಿಲ್ 5, 2020
19 °C

ರಾಜ್ಯದಲ್ಲಿ 3 ಹೊಸ ಪ್ರಕರಣ ಪತ್ತೆ: ಕೋವಿಡ್ ಪೀಡಿತರ ಸಂಖ್ಯೆ 18ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಇಂದು 3 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 18ಕ್ಕೆ ಏರಿದೆ. 

ಈ ಬಗ್ಗೆ ಟ್ವೀಟ್‌ ಮಾಡಿರುವ ಆರೋಗ್ಯ ಸಚಿವ ಬಿ.ಶ್ರೀರಾಮುಲು, ‘ರಾಜ್ಯದಲ್ಲಿ ಇಂದು 3 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 18ಕ್ಕೆ ಏರಿದೆ. ನಾಗರಿಕರು ಎಲ್ಲಾ ಮುಂಜಾಗೃತಾ ಕ್ರಮಗಳನ್ನು ತಪ್ಪದೇ ಕೈಗೊಳ್ಳಬೇಕೆಂದು ವಿನಂತಿಸುತ್ತೇನೆ’ ಎಂದು ಮನವಿ ಮಾಡಿಕೊಂಡಿದ್ದಾರೆ. 

ಭಾರತದಲ್ಲಿ ಸದ್ಯ ಕೋವಿಡ್‌ ಸೋಂಕು ದೃಢಪಟ್ಟಿರುವವರ ಸಂಖ್ಯೆ 253 ದಾಟಿದ್ದು, ಐವರು ಬಲಿಯಾಗಿದ್ದಾರೆ. 

ಜಗತ್ತಿನಾದ್ಯಂತ ಕೊರೊನಾ ಸೋಂಕು ಪೀಡಿತರ ಸಂಖ್ಯೆ 2,76,671ಕ್ಕೆ ಏರಿದ್ದು, ಒಟ್ಟು 11,417 ಮಂದಿ ಬಲಿಯಾಗಿದ್ದಾರೆ. 
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು