ಮಂಗಳವಾರ, ಏಪ್ರಿಲ್ 7, 2020
19 °C

ಎಸ್ಸೆಸ್ಸೆಲ್ಸಿ, 7ನೇ ತರಗತಿ ಪರೀಕ್ಷೆ ದಿನಾಂಕದಲ್ಲಿ ಬದಲಾವಣೆ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು 7ನೇ ತರಗತಿ ಮೌಲ್ಯಾಂಕನ ಪರೀಕ್ಷಾ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ, ಆದರೆ ಶುಕ್ರವಾರದಿಂದಲೇ ಎಲ್ಲಾ ಶಾಲೆಗಳು ಪರೀಕ್ಷಾ ಸಿದ್ಧತೆ ರಜೆ ನೀಡಬೇಕು ಎಂದು ಸರ್ಕಾರ ನಿರ್ದೇಶನ ನೀಡಿದೆ.

ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ 1ರಿಂದ 6ನೇ ತರಗತಿವರೆಗೆ ನಾಳೆಯಿಂದಲೇ ಬೇಸಿಗೆ ರಜೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ರಜೆ ಮುಗಿದ ಬಳಿಕ ಮಕ್ಕಳಿಗೆ ಪರೀಕ್ಷೆ ನಡೆಸುವುದಿಲ್ಲ. ಎಫ್ಎ _1,2,3,4, ಎಸ್ಎ 1 ಆಧಾರದಲ್ಲಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಬಡ್ತಿ ನೀಡಲಾಗುವುದು ಎಂದರು.

7ರಿಂದ 10ನೇ ತರಗತಿವರೆಗೆ ಶುಕ್ರವಾರದಿಂದಲೇ ಅಭ್ಯಾಸ ರಜೆ ನೀಡಬೇಕು. 9ನೇ ತರಗತಿವರೆಗೆ 23ರೊಳಗೆ ಪರೀಕ್ಷೆ ಕೊನೆಗೊಳಿಸಿ ಬೇಸಿಗೆ ರಜೆ ನೀಡಬೇಕು ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು