ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೇನಾನಿಗಳಿಗೆ ಮರಳು ಶಿಲ್ಪದ ಮೂಲಕ ಗೌರವ 

Last Updated 24 ಏಪ್ರಿಲ್ 2020, 9:28 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕೊರೊನಾ ವಿರುದ್ದ ಹೋರಾಡುತ್ತಿರುವ ವೈದ್ಯರು, ನರ್ಸ್, ಪೊಲೀಸರು, ಪೌರಕಾರ್ಮಿಕರು ಹಾಗೂ ಮಾಧ್ಯಮದವರಿಗೆ ಗೌರವ ಸಲ್ಲಿಸುವ ಸಲುವಾಗಿ ನಗರದ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಮರಳು ಶಿಲ್ಪವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ವೀಕ್ಷಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆರು,‌ ದಿನದ 24 ಗಂಟೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೊರೊನಾ ಸೋಂಕಿತರ ಹಾಗೂ ಪ್ರಾಥಮಿಕ ಹಂತದ ಸಂಪರ್ಕಕ್ಕೆ ಬಂದವರ ವಿವರವನ್ನು ಕಲೆಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ.ವೈದ್ಯರು ಜೀವದ ಹಂಗು ತೊರೆದು ಕೋವಿಡ್-19 ರೋಗಿಗಳ ಚಿಕಿತ್ಸೆ ಮಾಡುತ್ತಿದ್ದಾರೆ. ಕಿಮ್ಸ್ ವೈದ್ಯರ ಪರಿಶ್ರಮದಿಂದಾಗಿ ಕೋವಿಡ್-19 ಇಬ್ಬರು ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಧಾರವಾಡ ಜಿಲ್ಲಾಡಳಿತ, ಪೊಲೀಸರು, ಪಾಲಿಕೆ‌ ಪೌರಕಾರ್ಮಿಕರು ಕೂಡ ಸಮರ್ಪಣಾ ಭಾವದಿಂದ ಕೆಲಸ ನಿರ್ವಹಿಸುತ್ತಿದ್ದಾರೆ‌. ಇವರ ಕಾರ್ಯಕ್ಕೆ ಸರ್ಕಾರೇತರ ಸಂಘ ಸಂಸ್ಥೆಗಳು ಕೈ ಜೋಡಿಸಿವೆ. ಮಾಧ್ಯಮವರು ಕೊರೊನಾ ವಿರುದ್ದದ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿ ಜನರಲ್ಲಿ‌ ತಿಳಿವಳಿಕೆ ಮೂಡಿಸುತ್ತಿದ್ದಾರೆ. ಇವರೆಲ್ಲರಿಗೂ ಗೌರವ ಸಮರ್ಪಿಸುವ ನಿಟ್ಟಿನಲ್ಲಿ ಕಲಾವಿದ ಮಂಜುನಾಥ ಹಿರೇಮಠ ಮರಳು‌ ಶಿಲ್ಪ ರಚನೆ ಮಾಡಿದ್ದಾರೆ. ಕಲಾಕೃತಿ ಸುಂದರವಾಗಿ ಮೂಡಿ ಬಂದಿದೆ ಎಂದು ಶ್ಲಾಘಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT