ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರಿಗೆ ‘ಯೋಗ’ ಹೇಳಿಕೊಟ್ಟ ಎಡಿಜಿಪಿ ಅಲೋಕ್‌ ಕುಮಾರ್‌

Last Updated 23 ಜೂನ್ 2020, 15:43 IST
ಅಕ್ಷರ ಗಾತ್ರ

ಬೆಂಗಳೂರು: ‘ಕೊರೊನಾ ಯೋಧ’ರಾದ ಪೊಲೀಸರಿಗೆ ಕೊರೊನಾ ಸೋಂಕು ತಗುಲುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೊಲೀಸರ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಹಿರಿಯ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ.

ರಾಜ್ಯ ಮೀಸಲು ಪೊಲೀಸ್ ಪಡೆಯ (ಕೆಎಸ್ಆರ್‌ಪಿ) ಸಿಬ್ಬಂದಿ ಆರೋಗ್ಯ ವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿರುವ ಎಡಿಜಿಪಿ ಅಲೋಕ್‌ಕುಮಾರ್, ಕೆಎಸ್‌ಆರ್‌ಪಿ ಬೆಟಾಲಿಯನ್‌ಗಳಿಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ತಿಳಿವಳಿಕೆ ಮೂಡಿಸುತ್ತಿದ್ದಾರೆ.

ಬೆಟಾಲಿಯನ್‌ಗಳ ಪ್ರತಿಯೊಬ್ಬ ಸಿಬ್ಬಂದಿಯ ವಿಶೇಷ ಪರೇಡ್‌ ನಡೆಸುತ್ತಿರುವ ಅಲೋಕ್‌ಕುಮಾರ್, ಯೋಗ ಹಾಗೂ ಪ್ರಾಣಾಯಾಮಗಳನ್ನು ಪ್ರಾತ್ಯಕ್ಷಿಕೆ ಸಮೇತ ಹೇಳಿಕೊಡುತ್ತಿದ್ದಾರೆ. ಅಲೋಕ್‌ಕುಮಾರ್ ಅವರು ಉಸಿರಾಟ ಹಾಗೂ ಶ್ವಾಸಕೋಶ ಸಂಬಂಧಿತ ಪ್ರಾಣಾಯಾಮ ಹೇಳಿಕೊಡುತ್ತಿರುವ ವಿಡಿಯೊ ಈಗ ಎಲ್ಲೆಡೆ ಹರಿದಾಡುತ್ತಿದ್ದು, ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಪೊಲೀಸ್ ಸಮವಸ್ತ್ರದಲ್ಲೇ ಯೋಗಪಟುವಿನಂತೆ ಕುಳಿತು ಅಲೋಕ್‌ಕುಮಾರ್, ಯೋಗವನ್ನು ಹೇಳಿಕೊಟ್ಟಿದ್ದಾರೆ. ಯೋಗದ ಜೊತೆಗೆ ಪೌಷ್ಠಿಕ ಆಹಾರ ಸೇವಿಸುವಂತೆಯೂ ಸಿಬ್ಬಂದಿಗೆ ಹೇಳುತ್ತಿದ್ದಾರೆ. ಧೈರ್ಯದಿಂದ ಪರಿಸ್ಥಿತಿಯನ್ನು ಎದುರಿಸುವಂತೆಯೂ ತಿಳಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT