ಗುರುವಾರ , ಆಗಸ್ಟ್ 5, 2021
21 °C

ಕೊರೊನಾ ವೈರಸ್: ಮತ್ತೊಬ್ಬ ಪೊಲೀಸ್ ಸಾವು, ಎಎಸ್ಐಗೂ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಕೊರೊನಾ ಸೋಂಕು ತಗುಲಿ ಇತ್ತಿಚೆಗಷ್ಟೇ ನಗರದ ಎಎಸ್ಐಯೊಬ್ಬರು (ಸಹಾಯಕ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್) ಸಾವನ್ನಪ್ಪಿದ್ದು, ಇದರ ಬೆನ್ನಲ್ಲೇ ಮತ್ತೊಬ್ಬ ಪೊಲೀಸ್ ಅಸುನೀಗಿದ್ದಾರೆ.

ಕಲಾಸಿಪಾಳ್ಯ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ 54 ವರ್ಷದ ಹೆಡ್ ಕಾನ್‌ಸ್ಟೆಬಲ್ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ಬೆಳಿಗ್ಗೆ  7ರ ಸುಮಾರಿಗೆ ತೀರಿಕೊಂಡಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಹೆಡ್ ಕಾನ್‌ಸ್ಟೆಬಲ್ ಸೇರಿ ಕಲಾಸಿಪಾಳ್ಯ ಠಾಣೆಯ ಎಂಟು ಜನರಿಗೆ ಕೊರೊನಾ ಸೋಂಕು ತಗುಲಿದ್ದು ದೃಢಪಟ್ಟಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಹೆಡ್ ಕಾನ್‌ಸ್ಟೆಬಲ್ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಸಾವಿನಿಂದಾಗಿ ಪೊಲೀಸರು ಮತ್ತಷ್ಟು ಚಿಂತೆಗೀಡಾಗಿದ್ದಾರೆ. 

ಎಎಸ್ಐಗೂ ಸೋಂಕು; ಬೆಂಗಳೂರು ವಿಲ್ಸನ್ ಗಾರ್ಡನ್ ಠಾಣೆ ಎಎಸ್ಐಯೊಬ್ಬರಿಗೆ ಕೊರೊನಾ‌ ಸೋಂಕು ತಗುಲಿರುವುದು ಪರೀಕ್ಷೆಯಿಂದ ದೃಢಪಟ್ಟಿದೆ.

59 ವರ್ಷದ ಎಎಸ್ಐ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಲ್ಸನ್ ಗಾರ್ಡನ್ ಠಾಣೆಯನ್ನೂ ಸ್ಯಾನಿಟೈಸಿಂಗ್ ಮಾಡಲಾಗಿದ್ದು, ಹಲವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು