ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಇಬ್ಬರಲ್ಲಿ ಕೊರೊನಾ ಸೋಂಕು ಶಂಕೆ, ಆಸ್ಪತ್ರೆಗೆ ದಾಖಲು

Last Updated 21 ಮಾರ್ಚ್ 2020, 5:20 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ಪಟ್ಟಣದ ಇಬ್ಬರಲ್ಲಿ ಕೊರೊನಾ ವೈರಸ್ ಸೋಂಕು ತಗುಲಿದ ಲಕ್ಷಣಗಳು ಕಂಡುಬಂದಿದ್ದು, ಶಂಕಿತರನ್ನು ಬೆಂಗಳೂರಿನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಈ ಕುರಿತು ಪ್ರಜಾವಾಣಿಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಬಿ.ಎಂ.ಯೋಗೇಶ್ ಗೌಡ, ‘ಇತ್ತೀಚೆಗೆ ಮೆಕ್ಕಾ ಯಾತ್ರೆ ಮುಗಿಸಿ ಮಾರ್ಚ್ 16 ರಾತ್ರಿ ಗೌರಿಬಿದನೂರಿಗೆ ವಾಪಾಸಾದ 65 ವಯಸ್ಸಿನ ಮಹಿಳೆ ಮತ್ತು ಅವರ 31 ವಯೋಮಾನದ ಮಗನಲ್ಲಿ ಕೊರೊನಾ ವೈರಸ್ ಸೋಂಕಿನ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಇಬ್ಬರಿಗೂ ಬೆಂಗಳೂರಿನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ’ಎಂದು ಹೇಳಿದರು.

ಶಂಕಿತರಿಂದ ಸಂಗ್ರಹಿಸಿದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಒಂದೊಮ್ಮೆ ವರದಿಯಲ್ಲಿ ಕೋವಿಡ್ 19 ಇರುವುದು ದೃಢಪಟ್ಟರೆ ಅವರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲು ಸಿದ್ಧತೆ ಮಾಡಿಕೊಂಡಿದ್ದೇವೆಎಂದು ತಿಳಿಸಿದರು.

ಎರಡು ದಿನಗಳ ಕಾಲ ಶಂಕಿತರ ಸಂಪರ್ಕಕ್ಕೆ ಬಂದವರನ್ನು ಪತ್ತೆ ಮಾಡಿ, ಅವರನ್ನು ಗೃಹ ನಿರ್ಬಂಧನಕ್ಕೆ ಒಳಪಡಿಸಿ ತಪಾಸಣೆ ನಡೆಸಲಾಗುತ್ತಿದೆಎಂದರು. ಈವರೆಗೆ ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣಗಳು ವರದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT