ಗುರುವಾರ , ಏಪ್ರಿಲ್ 2, 2020
19 °C

ಮಂಗಳೂರಿನಲ್ಲಿ ಮತ್ತೆ ನಾಲ್ಕು ಕೋವಿಡ್‌–19 ಪ್ರಕರಣ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ನಾಲ್ವರಲ್ಲಿ ಕೋವಿಡ್‌–19 ಪ್ರಕರಣ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಐದು ಕೋವಿಡ್‌–19 ಪ್ರಕರಣಗಳು ದೃಢಪಟ್ಟಂತಾಗಿದೆ.

23 ವರ್ಷದ ಇಬ್ಬರು ಯುವಕರು ಇದೇ 20 ರಂದು ದುಬೈನಿಂದ ಸ್ಪೈಸ್‌ಜೆಟ್‌ ಮೂಲಕ ನಗರದ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಅವರನ್ನು ನೇರವಾಗಿ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. 47 ವರ್ಷದ ಇನ್ನೊಬ್ಬ ವ್ಯಕ್ತಿ ಇದೇ 19 ರಂದು ದುಬೈನಿಂದ ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಶಂಕೆಯ ಹಿನ್ನೆಲೆಯಲ್ಲಿ ನೇರವಾಗಿ ವೆನ್ಲಾಕ್‌ಗೆ ದಾಖಲಿಸಲಾಗಿದೆ.

ಇನ್ನು ಇದೇ 9 ರಂದು ಸೌದಿ ಅರೇಬಿಯಾದಿಂದ ಕ್ಯಾಲಿಕಟ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ 70 ವರ್ಷದ ಮಹಿಳೆ, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೂ ಕೋವಿಡ್‌–19 ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ತಿಳಿಸಿದ್ದಾರೆ.

ಈ ಮೊದಲು ದುಬೈನಿಂದ ನಗರಕ್ಕೆ ಬಂದಿದ್ದ ಭಟ್ಕಳದ ಯುವಕನಿಗೆ ಕೋವಿಡ್‌–19 ಪ್ರಕರಣ ದೃಢಪಟ್ಟಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು