ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸರಗೋಡು: ಇಬ್ಬರಲ್ಲಿ ಕೊರೊನಾ ವೈರಸ್ ಸೋಂಕು ದೃಢ

Last Updated 29 ಏಪ್ರಿಲ್ 2020, 16:02 IST
ಅಕ್ಷರ ಗಾತ್ರ

ಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ಇಬ್ಬರಲ್ಲಿ ಕೋವಿಡ್‌–19 ಸೋಂಕು ಇರುವುದು ಬುಧವಾರ ದೃಢಪಟ್ಟಿದೆ. ಇದರೊಂದಿಗೆ ಅಲ್ಲಿ ಸೋಂಕಿತರ ಸಂಖ್ಯೆ 178ಕ್ಕೇರಿದೆ.

ಮಂಗಳವಾರದವರೆಗೆ 162 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗಳಿಗೆ ಮರಳಿದ್ದರು. 14 ಮಂದಿ ಮಾತ್ರ ಆಸ್ಪತ್ರೆಗಳಲ್ಲಿ ಉಳಿದಿದ್ದರು. ಬುಧವಾರ ಒಬ್ಬ ರೋಗಿ ಗುಣಮುಖನಾಗಿ ಮನೆಗೆ ಮರಳಿದ್ದಾರೆ. ಆದರೆ ಮತ್ತೆ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಈಗ ಒಟ್ಟು 15 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಕೇರಳದಲ್ಲಿ ಬುಧವಾರ ಹತ್ತು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ ಆರು ಜನರು ಕೊಲ್ಲಂ ಜಿಲ್ಲೆಯವರು. ತಿರುವನಂತಪುರ ಮತ್ತು ಕಾಸರಗೋಡು ಜಿಲ್ಲೆಯ ತಲಾ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ’ ಎಂದು ಕೇರಳ ಆರೋಗ್ಯ ಇಲಾಖೆ ತಿಳಿಸಿದೆ.

ಕೋವಿಡ್‌–19 ಸೋಂಕು ಹರಡುವುದನ್ನು ನಿಯಂತ್ರಿಸುವುದಕ್ಕಾಗಿ ಕಾಸರಗೋಡು ಜಿಲ್ಲೆಯಲ್ಲಿ 1,930 ಜನರ ಮೇಲೆ ನಿಗಾ ಮುಂದುವರಿದಿದೆ. ಈ ಪೈಕಿ 1,900 ಜನರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. 30 ಜನರನ್ನು ಆಸ್ಪತ್ರೆಯಲ್ಲಿ ನಿಗಾದಲ್ಲಿ ಇಡಲಾಗಿದೆ. ಅವರಲ್ಲಿ ಒಬ್ಬರನ್ನು ಬುಧವಾರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT