ಶನಿವಾರ, ಜೂಲೈ 11, 2020
29 °C

ಡಿಕೆಶಿ ರೀತಿ ಕೀಳುಮಟ್ಟದ ರಾಜಕಾರಣ ಮಾಡುವುದಿಲ್ಲ: ಡಾ.ಕೆ.ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ‘ನಾನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಂತೆ ಕೀಳುಮಟ್ಟದ ರಾಜಕಾರಣ ಮಾಡುವುದಿಲ್ಲ’ ಎಂದು‌ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನಗೆ ಈವರೆಗೆ ಡಿ.ಕೆ.ಶಿವಕುಮಾರ್ ಅವರ ಸದ್ಗುಣಗಳು ಮಾತ್ರ ಗೊತ್ತಿತ್ತು. ಆದರೆ, ಅವರ ದೊಡ್ಡ ಗುಣ ಗೊತ್ತಿರಲಿಲ್ಲ’ ಎಂದು ವ್ಯಂಗ್ಯವಾಡಿದರು.

ಸುಧಾಕರ್ ಅವರು ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿರುವ ಈಜುಕೊಳದಲ್ಲಿ ಭಾನುವಾರ ಮಕ್ಕಳೊಂದಿಗೆ ಈಜಾಟವಾಡುತ್ತಿರುವ ಚಿತ್ರವನ್ನು ಟ್ವೀಟ್ ಮಾಡಿದ್ದರು.

ಅದಕ್ಕೆ ಡಿ.ಕೆ.ಶಿವಕುಮಾರ್ ಅವರು, ಇಡೀ ಜಗತ್ತು ಆರೋಗ್ಯ ಬಿಕ್ಕಟ್ಟಿನಲ್ಲಿ ಸಿಲುಕಿರುವಾಗ, ಕರೋನಾ ಉಸ್ತುವಾರಿ ಸಚಿವ ಡಾ.ಸುಧಾಕರ್ ಈಜುಕೊಳದಲ್ಲಿ ಸಮಯ ಕಳೆಯುವ ಮೂಲಕ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಇದು ನೈತಿಕತೆಯ ವಿಚಾರ. ಸುಧಾಕರ್ ಅವರು ಸ್ವ ಇಚ್ಛೆಯಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿ ಅವರು ಅವರನ್ನು ಮಂತ್ರಿಮಂಡಲದಿಂದ ವಜಾಗೊಳಿಸಬೇಕು’ ಎಂದು ಟೀಕಿಸಿದ್ದರು.

ಇದರ ಬೆನ್ನಲ್ಲೇ ತಮ್ಮ ಟ್ವೀಟ್‌ ವಿವಾದ ಸೃಷ್ಟಿಸುತ್ತದೆ ಎಂಬುದು ಅರಿವಿಗೆ ಬರುತ್ತಿದ್ದಂತೆ ಸುಧಾಕರ್ ಅವರು ಅದನ್ನು ತಮ್ಮ ಖಾತೆಯಿಂದ ಅಳಿಸಿ ಹಾಕಿದ್ದಾರೆ.

ಇದನ್ನೂ ಓದಿ...ಈಜು ಕೊಳದಲ್ಲಿ ಸುಧಾಕರ್, ರಾಜೀನಾಮೆಗೆ ಆಗ್ರಹಿಸಿದ ಶಿವಕುಮಾರ್‌

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು