ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ಸು, ಬಿಐಸಿಇನಲ್ಲಿ 10,100 ಹಾಸಿಗೆಗಳ ಆರೈಕೆ ಕೇಂದ್ರವೂ ಸಜ್ಜಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಗುರುವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೈಗೊಂಡಿರುವ ಕೋವಿಡ್ ನಿಯಂತ್ರಣ ಮತ್ತು ನಿರ್ವಹಣಾ ಕ್ರಮವನ್ನು ಕೇಂದ್ರ ಸರ್ಕಾರ ಮೆಚ್ಚಿಕೊಂಡಿದೆ ಎಂದರು.

ಕೋವಿಡ್ ಕೈಮೀರಿ ಹೋಗುತ್ತಿದೆಯೇ ಎಂದು ಕೇಳಿದಾಗ,ಕೆಲವೊಂದು ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ, ಜಿಲ್ಲಾಡಳಿತಗಳಿಗೆ ಎಲ್ಲ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ ಎಂದರು.

ವೈದ್ಯಕೀಯ ಉಪಕರಣಗಳ ಖರೀದಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ಸವಾಲಿನ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.