ಕಾರವಾರ: ಭಟ್ಕಳದ 26 ವರ್ಷದ ಗರ್ಭಿಣಿಯೊಬ್ಬರಿಗೆ ಕೋವಿಡ್ 19 ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಂಬತ್ತಕ್ಕೇರಿದೆ.

ಅವರ ಪತಿ ದುಬೈನಿಂದ ಮಾರ್ಚ್ 17ಕ್ಕೆ ವಾಪಸಾಗಿದ್ದು, ಅವರ ಕೋವಿಡ್ 19 ಪರೀಕ್ಷಾ ವರದಿಯು ನೆಗೆಟಿವ್ ಬಂದಿದೆ. ಪತ್ನಿಗೆ ಮಾರ್ಚ್ 31ರಂದು ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆಗ ಪತಿಯ ಕೈಯಲ್ಲಿದ್ದ ಹೋಂ ಕ್ವಾರಂಟೈನ್ ಮುದ್ರೆಯನ್ನು ಗಮನಿಸಿದ ಆಸ್ಪತ್ರೆ ಸಿಬ್ಬಂದಿ ವೈದ್ಯರ ಗಮನಕ್ಕೆ ತಂದರು. ಇಬ್ಬರನ್ನೂ ದಾಖಲಿಸಿಕೊಂಡು ಗಂಟಲುದ್ರವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.

ಪತಿಯ ವರದಿಯು ನೆಗೆಟಿವ್ ಬಂದಿದ್ದು, ಮತ್ತೊಮ್ಮೆ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಮೊದಲು ಎಂಟು ಮಂದಿ ಕೋವಿಡ್ ಪೀಡಿತರನ್ನು ನೌಕಾಪಡೆಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗುಣಮುಖರಾದ ಇಬ್ಬರು ಮಂಗಳವಾರ ಬಿಡುಗಡೆಯಾಗಿದ್ದರು. ಅವರನ್ನು ಜಿಲ್ಲಾಡಳಿತ ಗುರುತಿಸಿದ ಕ್ವಾರಂಟೈನ್ ಕೇಂದ್ರದಲ್ಲಿಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.