ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ | ಬಾಲಕ ಸೇರಿ ಮತ್ತೆ ಮೂವರಿಗೆ ಕೋವಿಡ್‌-19 ದೃಢ

Last Updated 15 ಮೇ 2020, 7:39 IST
ಅಕ್ಷರ ಗಾತ್ರ

ಹಾಸನ: ಮುಂಬೈನಿಂದ ಮರಳಿದ್ದ ಏಳು ವರ್ಷದ ಬಾಲಕ ಸೇರಿ ಮೂವರಿಗೆ ಕೋವಿಡ್ 19 ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

7 ವರ್ಷದ ಬಾಲಕ, 24 ವರ್ಷದ ಮಹಿಳೆ, 33 ವರ್ಷದ ಪುರುಷರಲ್ಲಿ ಸೋಂಕು ಕಾಣಿಸಿಕೊಂಡಿದೆ. ಮುಂಬೈನಿಂದ ಬಂದಿದ್ದ ಇವರೆಲ್ಲರನ್ನೂ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ಸೋಂಕಿತರು ಯಾರೊಂದಿಗೂ ಸಂಪರ್ಕ ಹೊಂದಿರಲಿಲ್ಲ.

ಚನ್ನರಾಯಪಟ್ಟಣದ ಕ್ವಾರಂಟೈನ್‌ ಕೇಂದ್ರದಲ್ಲಿ ಇಬ್ಬರು, ಅರಕಲಗೂಡಿನ ಕ್ವಾರಂಟೈನ್‌ ಕೇಂದ್ರದಲ್ಲಿ ಒಬ್ಬರು ಇದ್ದರು. ಎಲ್ಲರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.

ಮೂವರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿಹಾಸನದ ಕೋವಿಡ್ ಆಸ್ಪತ್ರೆ ಐಸೋಲೇಷನ್‌ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT