ಬೆಂಗಳೂರು:ರಾಜ್ಯದಲ್ಲಿ ಭಾನುವಾರ ಎರಡು ಕೋವಿಡ್–19 ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಸೋಂಕಿತರ ಸಂಖ್ಯೆ 83 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಮಾರ್ಚ್ 9 ಕ್ಕಿಂತ ಮೊದಲು ಕಾಣಿಸಿಕೊಂಡಿದ್ದ ಈ ಸೋಂಕು ವಿವಿಧ ಜಿಲ್ಲೆಗಳಿಗೆ ವ್ಯಾಪಿಸಿಕೊಳ್ಳುವ ಜತೆಗೆ ದಿನದಿಂದ ದಿನಕ್ಕೆಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಶನಿವಾರ ಒಂದೇ ದಿನ 17 ಪ್ರಕರಣಗಳು ವರದಿಯಾಗಿದ್ದವು. ಇದರಿಂದ ಸೋಂಕು ಸಮುದಾಯಕ್ಕೆ ಹರಡುವ ಆತಂಕವಿತ್ತು. ಆದರೆ, ಭಾನುವಾರ ಎರಡು ಪ್ರಕರಣಗಳು ಮಾತ್ರ ವರದಿಯಾಗಿವೆ.

ಮಾರ್ಚ್ 17ರಂದು ದುಬೈನಿಂದ ಬಂದಿದ್ದ 35 ವರ್ಷದ ವ್ಯಕ್ತಿ ಹಾಗೂ ಕೇರಳಕ್ಕೆ ಪ್ರಯಾಣ ಮಾಡಿ ಬಂದಿದ್ದ 29 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಬ್ಬರೂ ಉಡುಪಿಯವರಾಗಿದ್ದು, ಅವರಿಗೆ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸೋಂಕು ಶಂಕೆ ಹಿನ್ನೆಲೆಯಲ್ಲಿ 80 ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿಕೊಂಡು, ಅವರ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೆ 3 ಮಂದಿ ಮೃತಪಟ್ಟಿದ್ದಾರೆ. ಐವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ವರದಿಯಾದ ಕೋವಿಡ್–19 ಪ್ರಕರಣಗಳು

1. ಬೆಂಗಳೂರು;41

2. ಚಿಕ್ಕಬಳ್ಳಾಪುರ; 08

3. ಮೈಸೂರು: 08

4. ದಕ್ಷಿಣ ಕನ್ನಡ; 07

5. ಉತ್ತರ ಕನ್ನಡ; 07

6. ಕಲಬುರ್ಗಿ; 03

7. ದಾವಣಗೆರೆ; 03

8. ಉಡುಪಿ; 03

9. ಕೊಡಗು; 01

10. ಧಾರವಾಡ; 01

11. ತುಮಕೂರು; 01

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.