ಬೆಂಗಳೂರು: ‘ಕೊರೊನಾ ನಿಯಂತ್ರಣದಲ್ಲಿ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ‘#ಲೆಕ್ಕ ಕೊಡಿ’ ಎಂಬ ಹ್ಯಾಷ್ ಟ್ಯಾಗ್ನೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ವಿಡಿಯೊ ಅಭಿಯಾನ ಆರಂಭಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಪಕ್ಷದ ಎಲ್ಲ ಶಾಸಕರು, ಸಂಸದರು, ಕಾರ್ಯಕರ್ತರು ವಿಡಿಯೊ ಮಾಡಿ, ಶೇರ್ ಮಾಡುವ ಮೂಲಕ ಇದರಲ್ಲಿ ಭಾಗವಹಿಸಬೇಕು’ ಎಂದೂ ವಿನಂತಿಸಿದ್ದಾರೆ.

ವಿಡಿಯೊದಲ್ಲಿ ಸಿದ್ದರಾಮಯ್ಯ ಕೇಳಿದ ಪ್ರಶ್ನೆಗಳು ಹೀಗಿವೆ...

ಕೇಳುತ್ತಿದ್ದಾರೆ ಲೆಕ್ಕ...

* ಕೊರೊನಾ ಸೋಂಕು ಬಂದಾಗಿನಿಂದ ಇದುವರೆಗೆ ರಾಜ್ಯ ಸರ್ಕಾರ ಖರ್ಚು ಮಾಡಿದ ಹಣ ಎಷ್ಟು? ಕೇಂದ್ರ ಸರ್ಕಾರ ಎಷ್ಟು ನೀಡಿದೆ. ಯಾವ ಯಾವ ಇಲಾಖೆ, ಯಾವ ಯಾವ ಪಾವತಿಗೆ ಎಷ್ಟು ಹಣ ಖರ್ಚು ಮಾಡಿದೆ.

* ಪಿಪಿಇ ಕಿಟ್, ಟೆಸ್ಟ್ ಕಿಟ್, ಗ್ಲೌಸ್, ಸಾನಿಟೈಸರ್, ಥರ್ಮಲ್ ಸ್ಕ್ಯಾನರ್, ಕಿಯೋಸ್ಕ್ ಮುಂತಾದವುಗಳಿಗೆ ಮಾರುಕಟ್ಟೆ ದರ ಎಷ್ಟು? ನೀವು ಪ್ರತಿಯೊಂದನ್ನೂ ಯಾವ ಯಾವ ದರದಲ್ಲಿ ಖರೀದಿಸಿದ್ದೀರಿ. ಯಾವ ಯಾವ ಕಂಪನಿಗಳಿಂದ ಖರೀದಿಸಿದ್ದೀರಿ.

* ಈವರೆಗೆ ಫುಡ್ ಕಿಟ್, ಫುಡ್ ಪ್ಯಾಕೇಜ್ ಎಷ್ಟು ಕೊಟ್ಟಿದ್ದೀರಿ? ಯಾರಿಗೆ ಕೊಟ್ಟಿದ್ದೀರಿ? ಪ್ರತಿಯೊಂದಕ್ಕೆ ಎಷ್ಟು ಹಣ ಖರ್ಚು ಮಾಡಿದ್ದೀರಿ. ಆಹಾರ ತಯಾರಿಸಿ ಕೊಟ್ಟವರು ಯಾರು? ತಾಲ್ಲೂಕುವಾರು, ವಾರ್ಡ್ವಾರು ಲೆಕ್ಕ ಕೊಡಿ.

* ವಲಸೆ ಕಾರ್ಮಿಕರಿಗೆ ಪ್ರಯಾಣದ ಸಂದರ್ಭದಲ್ಲಿ ಎಷ್ಟು ಫುಡ್ ಕಿಟ್ ಕೊಟ್ಟಿದ್ದೀರಿ. ಏನೇನು ಕೊಟ್ಟಿದ್ದೀರಿ? ಪ್ರತಿ ಕಿಟ್ಗೆ ಖರ್ಚಾದ ಹಣ ಎಷ್ಟು?

* ಸಂಕಷ್ಟದಲ್ಲಿರುವ ಜನರಿಗೆ ಕೇಂದ್ರ, ರಾಜ್ಯ ಸರ್ಕಾರ ಘೋಷಿಸಿದ ಪ್ಯಾಕೇಜ್ಗಳು ಯಾವುವು? ಯಾವ ವೃತ್ತಿಯವರಿಗೆ, ಯಾವ ಯಾವ ಸಮುದಾಯದವರಿಗೆ ಎಷ್ಟು ಹಣ ಬಿಡುಗಡೆ ಮಾಡಿದ್ದೀರಿ?

* ಕೊರೊನಾ ಸಂಕಷ್ಟದಲ್ಲಿರುವವರ ಆರೈಕೆಗೆ ಎಷ್ಟು ಖರ್ಚು ಮಾಡಿದ್ದೀರಿ?

’ಈ ಎಲ್ಲದರ ಸಂಪೂರ್ಣ ಲೆಕ್ಕ ಕೊಡಿ. ಲೆಕ್ಕ ಕೇಳುವುದು ರಾಜ್ಯ ಜನತೆಯ ಹಕ್ಕು. ಲೆಕ್ಕ ಕೊಡುವುದು ನಿಮ್ಮ ಕರ್ತವ್ಯ’ ಎಂದೂ ಅವರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.