ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಕೋವಿಡ್-19 ನಿಯಂತ್ರಣ ಸಭೆಯಲ್ಲಿ ಸಂಸದ– ಶಾಸಕರ ನಡುವೆ ಜಟಾಪಟಿ

Last Updated 9 ಮೇ 2020, 9:18 IST
ಅಕ್ಷರ ಗಾತ್ರ

ದಾವಣಗೆರೆ: ಸಂಸದ ಜಿ.ಎಂ. ಸಿದ್ದೇಶ್ವರ್ ಹಾಗೂ ಶಾಸಕ ಮಾಡಾಳ್ ವಿರುಪಾಕ್ಷಪ್ಪ ನಡುವೆ ತೀವ್ರ ವಾಗ್ವಾದ ನಡೆದಿದೆ.

ಸಚಿವ ಡಾ.ಕೆ. ಸುಧಾಕರ್ ಹಾಗೂ ಬೈರತಿ ಬಸವರಾಜ್ ನೇತೃತ್ವದಲ್ಲಿ ದಾವಣಗೆರೆಯ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ ಮತ್ತು ಶಾಸಕ ಮಾಡಾಳ್ ವಿರುಪಾಕ್ಷಪ್ಪ ಕಿತ್ತಾಟ ನಡೆಸಿದ್ದಾರೆ.

ಜನರಿಗೆ ಉಚಿತವಾಗಿ ಶುದ್ದ ಕುಡಿಯುವ ಘಟಕದ ನೀರನ್ನು ನೀಡಬೇಕೆಂದು ಶಾಸಕರ ಮಾಡಾಳ್ ವೀರುಪಾಕ್ಷಪ್ಪ ಸಭೆಯಲ್ಲಿ ಒತ್ತಾಯಿಸಿದರು. ಇದೇ ಮಧ್ಯಪ್ರವೇಶಿಸಿದ ಸಂಸದ ಸಿದ್ದೇಶ್ವರ್, ಹಣ ನಿಮ್ಮಪ್ಪನ ಮನೆಯಿಂದ ಕೊಡುತ್ತೀಯಾ? ಎಂದು ಪ್ರಶ್ನೆಸಿದರು.

ಸಂಸದರ ಮಾತಿಗೆ ತಿರುಗೇಟು ನೀಡಿದ ವೀರುಪಾಕ್ಷಪ್ಪ ಹಣ ನಿಮ್ಮಪ್ಪನ ಮನೆಯಿಂದ ಕೊಡ್ತಿಯಾ ಎಂದು ಪ್ರಶ್ನಿಸಿದರು. ಮಾತಿಗೆ ಮಾತು ಬೆಳೆದು ಸಚಿವರುಗಳ ಎದುರೇ ಶಾಸಕ- ಸಂಸದ ಹೊಡೆದಾಟಕ್ಕೆ ನಿಂತರು.

ಸ್ಥಳದಲ್ಲೇ ಇದ್ದ ಎಸ್ಪಿ ಹನುಮಂತರಾಯ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಶಾಸಕ– ಸಂಸದರನ್ನು ಸಮಾಧಾನಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT