ಬೆಂಗಳೂರು: ಉಡುಪಿಯಲ್ಲಿ 150 ಸೇರಿದಂತೆ ರಾಜ್ಯದಲ್ಲಿ ಮಂಗಳವಾರ ಒಂದೇ ದಿನ 388 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಈವರೆಗೆ ಒಂದು ದಿನ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿದ್ದು, ಸೋಂಕಿತರ ಸಂಖ್ಯೆ 3,796ಕ್ಕೆ ಏರಿಕೆಯಾಗಿದೆ.

ಲಾಕ್ ಡೌನ್ ಸಡಿಲಿಸಿದ ಬಳಿಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಂದೇ ಸಮನೆ ಏರಿಕೆಯಾಗಲಾರಂಭಿಸಿದೆ. ಹೊಸದಾಗಿ ವರದಿಯಾದ ಪ್ರಕರಣಗಳಲ್ಲಿ 367 ಮಂದಿ ಅನ್ಯ ರಾಜ್ಯಗಳಿಗೆ ಪ್ರಯಾಣ ಮಾಡಿದ ಇತಿಹಾಸ ಹೊಂದಿದ್ದಾರೆ. ಈ ಪೈಕಿ 355 ಮಂದಿ ಮಹಾರಾಷ್ಟ್ರದಿಂದ ತವರೂರಿಗೆ ವಾಪಸ್ ಆದವರಾಗಿದ್ದಾರೆ. ಇದರಿಂದಾಗಿ ಒಟ್ಟು ಸೋಂಕಿತರಲ್ಲಿ 1,931 ಮಂದಿ ಮಹಾರಾಷ್ಟ್ರದ ನಂಟು ಹೊಂದಿದವರು.

ಮಂಗಳವಾರ ಒಂದೇ ದಿನ 14,812 ಮಂದಿಯ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. 75 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಜಿಲ್ಲಾವಾರು ಕೋವಿಡ್ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದ ಉಡುಪಿ, ಮಹಾರಾಷ್ಟ್ರದ ನಂಟಿನಿಂದಾಗಿ ಅಗ್ರಸ್ಥಾನಕ್ಕೆ ಏರಿಕೆಯಾಗಿದೆ. ಲಾಕ್‌ಡೌನ್ ಸಡಿಲಿಸಿದ ಬಳಿಕ ಅಲ್ಲಿಗೆ ಮಹಾರಾಷ್ಟ್ರ ಒಂದರಿಂದಲೇ 7 ಸಾವಿರಕ್ಕೂ ಅಧಿಕ ಮಂದಿ ಬಂದಿದ್ದರು. ಅವರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.