ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19: ರಾಜ್ಯದಲ್ಲಿ 12 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 371ಕ್ಕೆ ಏರಿಕೆ

Last Updated 18 ಏಪ್ರಿಲ್ 2020, 7:29 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಾದ್ಯಂತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಶುಕ್ರವಾರ ಸಂಜೆ 5 ಗಂಟೆಯಿಂದಶನಿವಾರ ಮಧ್ಯಾಹ್ನ 12 ಗಂಟೆವರೆಗೆ 12 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 371ಕ್ಕೇರಿದೆ.

ಈವರೆಗೆ ಕೋವಿಡ್-19 ನಿಂದಾಗಿ 13 ಜನರು ಮೃತಪಟ್ಟಿದ್ದು, 92 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಲಾಗಿದೆ.

360ನೇ ರೋಗಿ ಕಲಬುರ್ಗಿಯ 34 ವರ್ಷಗಳ ಪುರುಷ ಹಾಗೂ 361ನೇ ರೋಗಿ 16 ವರ್ಷದ ಬಾಲಕನಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಮೈಸೂರು ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೋವಿಡ್-19 ದೃಢಪಟ್ಟಿದ್ದು, ನಂಜನಗೂಡಿನ ಔಷಧ ಕಾರ್ಖಾನೆಯ ಮೊದಲ ಸೋಂಕಿತ ವ್ಯಕ್ತಿಯಸಂಪರ್ಕಕಕ್ಕೆ ಬಂದ ಇಬ್ಬರಿಗೆಸೋಂಕಿರುವುದು ಪತ್ತೆಯಾಗಿದೆ.

ಉಳಿದಂತೆ ಬಾಗಲಕೋಟೆಯಲ್ಲಿ ಇಬ್ಬರು, ಮಂಡ್ಯ, ವಿಜಯಪುರ, ಹುಬ್ಬಳ್ಳಿ, ಬೆಳಗಾವಿ, ಗದಗದಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟದೆ.

ಬೆಂಗಳೂರು ನಗರ86 ಪ್ರಕರಣಗಳಿಂದಮೊದಲ ಸ್ಥಾನದಲ್ಲಿದೆ. ಮೈಸೂರು 76, ಬೆಳಗಾವಿ 42 ಪ್ರಕರಣಗಳಿಂದ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT