ಬುಧವಾರ, ಮೇ 27, 2020
27 °C

ಕೊರೊನಾ ವೈರಸ್: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 128

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಇಂದು (ಶುಕ್ರವಾರ) ಹೊಸದಾಗಿ ನಾಲ್ಕು ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ಬೆಳಕಿಗೆ ಬಂದಿವೆ. ಈವರೆಗೆ ಒಟ್ಟು 128 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಇಲಾಖೆ ಶುಕ್ರವಾರ ಸಂಜೆ 5ಕ್ಕೆ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. 

ಕೊರೊನಾ ವೈರಸ್‌ ಸೋಂಕಿನಿಂದ ರಾಜ್ಯದಲ್ಲಿ ಈವರೆಗೆ ಮೂವರು ಮೃತಪಟ್ಟಿದ್ದಾರೆ. ಸೋಂಕು ದೃಢಪಟ್ಟಿದ್ದ 11 ಮಂದಿ ಸೂಕ್ತ ಚಿಕಿತ್ಸೆಯೊಂದಿಗೆ ಸೋಂಕುಮುಕ್ತರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಸೋಂಕಿತರಲ್ಲಿ 111 ಮಂದಿ ನಿರ್ದಿಷ್ಟ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಒಬ್ಬರು ಗರ್ಭಿಣಿ ಸಹ ಸೇರಿದ್ದಾರೆ. ಮೂವರು ತುರ್ತು ನಿಗಾ ಘಟಕಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ರಾಜ್ಯದಲ್ಲಿ ಈವರೆಗೆ 341 ವ್ಯಕ್ತಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ದೆಹಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿಯಲ್ಲಿ ನಡೆದ ತಬ್ಲೀಗಿ ಜಮಾತ್‌ ಸಮಾವೇಶದಲ್ಲಿ ಪಾಲ್ಗೊಂಡವರೆಲ್ಲರೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ವರದಿ ಮಾಡಿಕೊಳ್ಳಬೇಕು. 080 29711171 ದೂರವಾಣಿ ಸಂಖ್ಯೆ ಸಂಪರ್ಕಿಸಬಹುದು ಎಂದು ಪ್ರಕಟಣೆ ಕೋರಿದೆ.

ಇಂದು ಸೋಂಕು ದೃಢಪಟ್ಟ ಪ್ರಕರಣಗಳ ವಿವರ ಇಂತಿದೆ...

ಪ್ರಕರಣ 125: ಬಾಗಲಕೋಟೆಯ 75 ವರ್ಷದ ಪುರುಷ. ವಿವರಣಾತ್ಮಕ ಪರಿಶೀಲನೆ ಪ್ರಗತಿಯಲ್ಲಿದೆ. ಬಾಗಲಕೋಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 126: ಬೆಳಗಾವಿಯ 70 ವರ್ಷದ ಪುರುಷ. ದೆಹಲಿಯಲ್ಲಿ ಮಾರ್ಚ್ 13ರಿಂದ 18ರವರೆಗೆ ನಡೆದ ತಬ್ಲೀಗಿ ಸಮಾವೇಶದಲ್ಲಿ ಭಾಗವಹಿಸಿದ್ದರು. ಬೆಳಗಾವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 127: ಬೆಳಗಾವಿಯ 26 ವರ್ಷದ ಪುರುಷ. ದೆಹಲಿಯ ತಬ್ಲೀಗಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಬೆಳಗಾವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 128: ಬೆಳಗಾವಿಯ 20 ವರ್ಷದ ಪುರುಷ. ದೆಹಲಿಯ ತಬ್ಲೀಗಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಬೆಳಗಾವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು