ಬೆಂಗಳೂರು: ಬೆಂಗಳೂರಿನಲ್ಲಿ 1235 ಸೇರಿದಂತೆ ಭಾನುವಾರ ಒಂದೇ ದಿನ ರಾಜ್ಯದಲ್ಲಿ 1925 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 23,474ಕ್ಕೆ ತಲುಪಿದೆ.

ಸೋಂಕಿನಿಂದ ಬಳಲುತ್ತಿದ್ದವರಲ್ಲಿ ಮತ್ತೆ 37 ಮಂದಿ ಮೃತಪಟ್ಟಿದ್ದಾರೆ. ಇದರಿಂದಾಗಿ ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಾವಿಗೀಡಾದವರ ಸಂಖ್ಯೆ 372ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ 302 ಸೇರಿದಂತೆ 603 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಶುಕ್ರವಾರ ಒಂದೇ ದಿನ 16899 ಮಂದಿಯ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 13251ಕ್ಕೆ ತಲುಪಿದೆ. ರಾಜ್ಯದ 29 ಜಿಲ್ಲೆಗಳಲ್ಲಿಯೂ ಹೊಸದಾಗಿ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ ಗರಿಷ್ಠ (1694) ಪ್ರಕರಣಗಳು ದೃಢಪಟ್ಟಿವೆ.

ದಾವಣಗೆರೆ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೇರಿದೆ. ಒಟ್ಟು ಪ್ರಕರಣಗಳ ಸಂಖ್ಯೆ 356ಕ್ಕೇರಿದೆ. ಭಾನುವಾರ ಏಳು ಮಂದಿ ಬಿಡುಗಡೆಗೊಂಡಿದ್ದಾರೆ. ಇಲ್ಲಿವರೆಗೆ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ 301 ಮಂದಿ ಬಿಡುಗಡೆಗೊಂಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭಾನುವಾರ ಒಂಬತ್ತು ಮಂದಿಗೆ ಕೋವಿಡ್ ದೃಢಪಟ್ಟಿದೆ. ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 46ಕ್ಕೆ ಏರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.