ಸೋಮವಾರ, ಏಪ್ರಿಲ್ 6, 2020
19 °C

ಕೊರೊನಾ ವೈರಸ್‌ ಭೀತಿ: ಮಂತ್ರಾಲಯದಲ್ಲಿ ರಾಯರ ದರ್ಶನ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಮಂತ್ರಾಲಯದಲ್ಲಿ ಸಾರ್ವಜನಿಕರಿಗೆ ರಾಯರ ದರ್ಶನವನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂಧ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಕೊರೊನಾ ವೈರಸ್‌ ಪ್ರಭಾವವು ದೇಶದೆಲ್ಲೆಡೆ ತುಂಬಾ ಉಗ್ರವಾಗಿ ಇರುವುದರಿಂದ, ಇದೆಲ್ಲವೂ ಶಾಂತವಾಗುವ ತನಕ ಹಾಗೂ ಆರೋಗ್ಯ ಇಲಾಖೆಯವರು ಸೂಚನೆ ಕೊಡುವವರೆಗೂ ಯಾವುದೇ ತರಹದ ಭಕ್ತರು ಸುತಾರಾಂ ಮಂತ್ರಾಲಯಕ್ಕೆ ಬರುವುದು ಬೇಡ. ಅಲ್ಲಲ್ಲಿಯೇ ರಾಯರ ಸೇವೆ ಮಾಡಿ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕು ಎಂದು ಸಲಹೆ ನೀಡಿದ್ದಾರೆ.

‘ಮಂತ್ರಾಲಯ ಮಠದೊಳಗೆ ಎಂದಿನಂತೆ ಪೂಜಾರಾಧನೆಗಳು ಎಂದಿನಂತೆ ನಡೆಯುತ್ತವೆ. ಆದರೆ, ಅವಕಾಶ, ಪ್ರವೇಶವನ್ನು ಸಂಪೂರ್ಣ ನಿಷೇಧಿಸಿದ್ದೇವೆ’ ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು